ಮಡಿಕೇರಿ: ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಮಹಿಳೆಯರ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಮತ್ತು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಕಡಗದಾಳು ಗ್ರಾಮ ಪಂಚಾಯಿತಿ ವತಿಯಿಂದ ಸರ್ಕಾರಿ ಫ್ರೌಡಶಾಲಾ ಆವರಣದಲ್ಲಿ ಅಂತರರಾಷ್ಟ್ರೀಯ ಮಹಿಳಾ ದಿನಾಚರಣೆಯ ಅಂಗವಾಗಿ ಪೋಷಣ್ ಅಭಿಯಾನ ಯೋಜನೆಯಡಿ ಪೋಷಣ್ ಪಕ್ವಾಡ ಕಾರ್ಯಕ್ರಮ ಮತ್ತು ಮಹಿಳಾ ಗ್ರಾಮ ಸಭೆಯು ನಡೆಯಿತು.
ಪೋಷಣ್ ಅಭಿಯಾನ ಯೋಜನೆ ಕುರಿತು ಶಾಲಾ ಮಕ್ಕಳು, ಸ್ತ್ರೀಶಕ್ತಿ ಗುಂಪಿನ ಮಹಿಳೆಯರು, ಅಂಗನವಾಡಿ ಕಾರ್ಯಕರ್ತೆಯರು ಹಾಗೂ ವಿವಿಧ ಇಲಾಖಾ ಅಧಿಕಾರ-ಸಿಬ್ಬಂದಿ ವೃಂದದವರು ಸೇರಿ ಪೋಷಣ್ ಪಕ್ವಾಡ್ ಕುರಿತ ಜಾಥಾ ಕಾರ್ಯಕ್ರಮ ಹಮ್ಮಿಕೊಳ್ಳಲಾಯಿತು.
ನಂತರದಲ್ಲಿ ಪುರುಷರು ಮತ್ತು ಮಹಿಳೆಯರು ತಯಾರಿಸಿದ ಒಲೆರಹಿತ ಅಡುಗೆ ಮತ್ತು ಪೌಷ್ಟಿಕ ಆಹಾರ ಪ್ರದರ್ಶನ ಮೇಳವನ್ನು ಗಣ್ಯರು ವೀಕ್ಷಿಸಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಜಿ.ಪಂ. ಅಧ್ಯಕ್ಷ ಬಿ.ಎ. ಹರೀಶ್ ವಹಿಸಿದ್ದರು. ಕಡಗದಾಳು ಅಂಗನವಾಡಿ ಮಕ್ಕಳ ಪ್ರಾರ್ಥನೆಯ ಮುಖಾಂತರ ಕಾರ್ಯಕ್ರಮ ಪ್ರಾರಂಭಿಸಲಾಯಿತು. ವೇದಿಕೆಯಲ್ಲಿದ್ದ ಗಣ್ಯರು ಕಾರ್ಯಕ್ರಮ ಉದ್ಘಾಟಿಸಿದರು.
ಜಿ.ಪಂ. ಅಧ್ಯಕ್ಷ ಬಿ.ಎ. ಹರೀಶ್ ಮಾತನಾಡಿ, ಮಹಿಳೆಯರು ಮುಖ್ಯವಾಹಿನಿಗೆ ಬರಬೇಕು. ವಿವಿಧ ಇಲ್ಲಾಖೆಯಲ್ಲಿರುವ ಯೋಜನೆಗಳ ಸೌಲಭ್ಯ ಪಡೆಯುವಂತೆ ಅವರು ತಿಳಿಸಿದರು. ಮಹಿಳಾ ಗ್ರಾಮ ಸಭೆಯಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಮಹಿಳೆಯರು ಭಾಗವಹಿಸಿ ತಮ್ಮ ಆಶೋತ್ತರ ಮತ್ತು ಸಮಸ್ಯೆಗಳ ಕುರಿತು ಮಾತನಾಡಬೇಕಾಗಿ ತಿಳಿಸಿದರು.
ಶಿಶು ಅಭಿವೃದ್ಧಿ ಯೋಜನಾಧಿಕಾರಿ ಅರುಂಧತಿ ಮಾತನಾಡಿ, ಪೋಷಣ್ ಅಭಿಯಾನ ಯೋಜನೆಯ ಪೋಷಣ್ ಪಕ್ವಾಡದ ಗುರಿ ಮತ್ತು ಉದ್ಧೇಶಗಳ ಕುರಿತು ಸವಿವರವಾಗಿ ವಿವರಿಸಿಸುತ್ತಾ ಮಹಿಳೆಯು ತಾಯಿಯಾಗಿ, ತಂಗಿಯಾಗಿ, ಹೆಂಡತಿಯಾಗಿ, ಸಹೋದರಿಯಾಗಿ, ಸ್ನೇಹಿತೆಯಾಗಿ, ಮಗಳಾಗಿ, ಸೊಸೆಯಾಗಿ ತನ್ನ ಕರ್ತವ್ಯವನ್ನು ನಿಭಾಯಿಸುವ ಭರದಲ್ಲಿ ತನ್ನನ್ನು ತಾನು ಮರೆತ್ತಿದ್ದಾಳೆ ಎಂದರು.
ನಂತರದಲ್ಲಿ ಕಡಗದಾಳು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಗರ್ಭಿಣಿಯರಿಗೆ ಸೀಮಂತ ಕಾರ್ಯಕ್ರಮವನ್ನು ಇಲಾಖೆಯ ವತಿಯಿಂದ ನಡೆಸಲಾಯಿತು. ಆರೋಗ್ಯ ಇಲಾಖೆಯವರ ಸಹಕಾರದೊಂದಿಗೆ ರಕ್ತಹೀನತೆ ತಪಾಸಣಾ ಶಿಬಿರವನ್ನು ಮಹಿಳೆಯರಿಗೆ ಮತ್ತು ಕಿಶೋರಿಯರಿಗೆ ಹಮ್ಮಿಕೊಳ್ಳಲಾಯಿತು.
ವೇದಿಕೆಯಲ್ಲಿ ಕಡಗದಾಳು ಗ್ರಾಮ ಪಂಚಾಯಿತಿ ಅಧ್ಯಕ್ಷರು, ಸದಸ್ಯರುಗಳು, ತಾಲೂಕು ಶಿಕ್ಷಣಾಧಿಕಾರಿಯವರು, ಮಡಿಕೇರಿ, ಉಪ ನಿರ್ದೇಶಕರು ಮಹಿಳೆಯರ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಶಿಶು ಅಭಿವೃದ್ಧಿ ಯೋಜನಾಧಿಕಾರಿ, ಮಡಿಕೇರಿ ಮುಖ್ಯೋಪಾಧ್ಯಾಯರು, ಕಡಗದಾಳು ಇವರುಗಳು ಉಪಸ್ಥಿತರಿದ್ದರು. ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದ ಗಣ್ಯರನ್ನು ತಾ.ಪಂ. ಇಒ ಲಕ್ಷ್ಮಿ ಸ್ವಾಗತಿಸಿ, ಮಹಿಳಾ ಗ್ರಾಮ ಸಭೆಯ ಪ್ರಾಮುಖ್ಯತೆ ಬಗ್ಗೆ ವಿವರಿಸಿದರು.
ಸೋಮವಾರಪೇಟೆ: ಕೆಲವೊಂದು ಅನಿಷ್ಟ ಕಟ್ಟುಪಾಡುಗಳಿಂದ ಹೊರಬಂದು ಹೆಣ್ಣುಮಕ್ಕಳು ಇಂದು ತಮ್ಮ ಸ್ವಾತಂತ್ರ್ಯವನ್ನು ಅನುಭವಿಸುವಂತಾಗಿರುವದು ಮಹಿಳಾ ಸಬಲೀಕರಣಕ್ಕೆ ಸಾಕ್ಷಿ ಎಂದು ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿಗಳು ಹಾಗೂ ಹಿರಿಯ ಸಿವಿಲ್ ನ್ಯಾಯಾಧೀಶೆ ನೂರುನ್ನೀಸಾ ಅಭಿಪ್ರಾಯಿಸಿದರು.
ಸೋಮವಾರಪೇಟೆ ತಾಲೂಕು ಸ್ತ್ರೀ ಶಕ್ತಿ ಬ್ಲಾಕ್ ಸೊಸೈಟಿ ವತಿಯಿಂದ ಇಲ್ಲಿನ ಸ್ತ್ರೀಶಕ್ತಿ ಭವನದಲ್ಲಿ ವಿಶ್ವ ಮಹಿಳಾ ದಿನಾಚರಣೆಯ ಅಂಗವಾಗಿ ಆಯೋಜಿಸಲಾಗಿದ್ದ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.
ಮಹಿಳೆಯರು ಆಧುನಿಕ ಯುಗಕ್ಕೆ ಹೊಂದಿಕೊಂಡಂತೆ ನಿಧಾನಗತಿಯಲ್ಲಿ ತಮ್ಮ ಸ್ವಾತಂತ್ರ್ಯದ ಮಹತ್ವವನ್ನು ತಿಳಿದುಕೊಂಡು ಹಂತಹಂತವಾಗಿ ತಮ್ಮ ಹಕ್ಕು ಬಾಧ್ಯತೆಗಳನ್ನು ಪಡೆದುಕೊಳ್ಳುತ್ತಿದ್ದಾರೆ. ಮನೆಯಿಂದ ಹಿಡಿದು ಹೊರಜಗತ್ತಿನ ವರೆಗೆ ಮಹಿಳೆಯು ತನ್ನ ಛಾಪನ್ನು ಮೂಡಿಸಿ ಎಲ್ಲಾ ಕ್ಷೇತ್ರಗಳಲ್ಲಿಯೂ ಮುಂದಿರುವುದು ಮಹಿಳಾ ಸಾಮಥ್ರ್ಯವನ್ನು ತೋರಿಸುತ್ತದೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.
ಕೊಡಗು ಜಿಲ್ಲಾ ಪತ್ರಕರ್ತರ ಸಂಘದ ಅಧ್ಯಕ್ಷೆ ಬಿ.ಆರ್. ಸವಿತಾ ರೈ ಮಾತನಾಡಿದರು. ಕಾರ್ಯಕ್ರಮದಲ್ಲಿ ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿದ ಮಹಿಳಾ ಸಾಧಕಿಯರಾದ ಡಾ. ಸುಪರ್ಣ, ಸ್ತ್ರೀ ಶಕ್ತಿ ಬ್ಲಾಕ್ ಸೊಸೈಟಿಯ ಅಧ್ಯಕ್ಷೆ ಸುಮತಿ ಸತೀಶ್, ಜಿಲ್ಲಾ ಸ್ತ್ರೀಶಕ್ತಿ ಒಕ್ಕೂಟದ ಅಧ್ಯಕ್ಷೆ ರೆಹನಾ ಫಿರೋಜ್, ಸ್ತ್ರೀ ಶಕ್ತಿ ಒಕ್ಕೂಟದ ನಿರ್ದೇಶಕಿ ದಮಯಂತಿ, ಲೀಲಾವತಿ, ಮೀನಾಕ್ಷಿ, ಶಾಂತಿ, ಭಾಗೀರಥಿ, ಕೆ.ಕೆ. ಶಾರದ, ಕಮಲಮ್ಮ ಅವರುಗಳನ್ನು ಸನ್ಮಾನಿಸಲಾಯಿತು.
ಕಾರ್ಯಕ್ರಮದಲ್ಲಿ ಸೋಮವಾರಪೇಟೆಯ ಪ್ರಧಾನ ಸಿವಿಲ್ ನ್ಯಾಯಾಧೀಶೆ ಪ್ರತಿಭಾ, ಸೋಮವಾರಪೇಟೆ ತಾಲೂಕು ಶಿಶು ಅಭಿವೃದ್ಧಿ ಯೋಜನಾಧಿಕಾರಿ ಅಣ್ಣಯ್ಯ, ತಾಲೂಕು ಸ್ತ್ರೀ ಶಕ್ತಿ ಒಕ್ಕೂಟದ ಕಾರ್ಯದರ್ಶಿ ಹೆಚ್.ಎಂ. ಹೇಮ, ಮೇರಿ ಅಂಬುದಾಸ್, ಲಲಿತಮ್ಮ, ಸರೋಜಾ, ಪ್ರೇಮ ಸೇರಿದಂತೆ ಸಂಘದ ಪದಾಧಿಕಾರಿಗಳು, ಅಂಗನವಾಡಿ ಕಾರ್ಯಕರ್ತೆಯರು, ಸಹಾಯಕಿಯರು ಉಪಸ್ಥಿತರಿದ್ದರು.
ಸುಂಟಿಕೊಪ್ಪ: ದೇಯಿಬೈದೇತಿ ಬಿಲ್ಲವ ಮಹಿಳಾ ಸಂಘದ ವತಿಯಿಂದ ಶ್ರೀ ನಾರಾಯಣ ಗುರು ಬಿಲ್ಲವ ಸೇವಾ ಸಂಘದ ಕಚೇರಿಯಲ್ಲಿ ಮಹಿಳಾ ದಿನಾಚರಣೆಯನ್ನು ಆಚರಿಸಲಾಯಿತು.
ಸಮಾರಂಭದ ಅಧ್ಯಕ್ಷತೆಯನ್ನು ದೇಯಿಬೈದೇತಿ ಬಿಲ್ಲವ ಮಹಿಳಾ ಸಂಘದ ಅಧ್ಯಕ್ಷೆ ಮಧು ನಾಗಪ್ಪ ವಹಿಸಿದ್ದರು. ಈ ಸಂದರ್ಭ ಬಿಲ್ಲವ ಸಂಘದ ಅಧ್ಯಕ್ಷ ಬಿ.ಎಂ. ಮಣಿ ಮುಖೇಶ್, ದೇಯಿಬೈದೇತಿ ಬಿಲ್ಲವ ಮಹಿಳಾ ಸಂಘದ ಮಾಜಿ ಅಧ್ಯಕ್ಷೆ ಅಂಜಲಿ ಯಶೋಧರಾ ಪೂಜಾರಿ, ಪೂರ್ಣಿಮಾ ಗಿರೀಶ್, ಜಯಂತಿ, ದೇವಕ್ಕಿ ಹೊನ್ನಪ್ಪ, ಮಹಿಮಾ, ರಾಘವ ಶೈಲಾಶ್ರೀ, ಕುಸುಮ ಹಾಗೂ ಪೂರ್ಣಿಮಾ ರವಿ ಇದ್ದರು.ಕುಶಾಲನಗರ: ಕುಶಾಲನಗರ ಸಮೀಪದ ಕೊಪ್ಪ ಮರಡಿಯೂರು ಗ್ರಾಮದ ಆಕ್ಸಿಲಿಯಂ ಕಾನ್ವೆಂಟ್ನಲ್ಲಿ ವಿಶ್ವ ಮಹಿಳಾ ದಿನಾಚರಣೆ ಅಂಗವಾಗಿ ವಿಶೇಷ ಕಾರ್ಯಕ್ರಮ ನಡೆಯಿತು. ಕಾರ್ಯಕ್ರಮದ ಮುಖ್ಯ ಅತಿಥಿಗಳಾಗಿ ಪಿರಿಯಾಪಟ್ಟಣದ ಕಾರ್ಯಕ್ರಮ ವ್ಯವಸ್ಥಾಪಕಿ ರೋಸಿ, ಶಿಕ್ಷಕಿ ಸ್ವಾತಿ ಮತ್ತಿತರರು ಪಾಲ್ಗೊಂಡಿದ್ದರು.
ಸ್ಥಳೀಯ 26 ಕ್ಕೂ ಅಧಿಕ ಸ್ವಸಹಾಯ ಸಂಘಗಳ ಮಹಿಳಾ ಸದಸ್ಯರು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು. ವಿವಿಧ ಆಟೋಟ ಸ್ಪರ್ಧೆಗಳಲ್ಲಿ ಪಾಲ್ಗೊಂಡು ವಿಜೇತರಾದವರಿಗೆ ಬಹುಮಾನ ವಿತರಣೆ ನಡೆಯಿತು.
ಕೂಡಿಗೆ: ಅಂತರರಾಷ್ಟ್ರೀಯ ಮಹಿಳಾ ದಿನಾಚರಣೆಯ ಅಂಗವಾಗಿ ಕೂಡುಮಂಗಳೂರು ಗ್ರಾ.ಪಂ. ಸಭಾಂಗಣದಲ್ಲಿ ವಿಶೇಷ ಮಹಿಳಾ ಗ್ರಾಮ ಸಭೆ ನಡೆಯಿತು.
ಮಹಿಳಾ ಗ್ರಾಮ ಸಭೆಯ ಅಧ್ಯಕ್ಷತೆಯನ್ನು ಕೂಡುಮಂಗಳೂರು ಗ್ರಾ.ಪಂ ಅಧ್ಯಕ್ಷೆ ಲಕ್ಷ್ಮಿ ರವಿ ವಹಿಸಿದ್ದರು. ವಿಶೇಷ ಆಹ್ವಾನಿತರಾಗಿ ಆಗಮಿಸಿದ ಚಿಕ್ಕತ್ತೂರು ಶಾಲಾ ಶಿಕ್ಷಕಿ ಶಶಿಕಲಾ ಮಹಿಳೆಯರ ಸ್ಥಾನಮಾನ ಗೌರವ ಹಕ್ಕುಗಳ ಬಗ್ಗೆ ಮಾಹಿತಿ ನೀಡಿದರು.
ಆರೋಗ್ಯ ಇಲಾಖೆಯ ಸಕೀನಾ ಮಾತನಾಡಿ, ಮಹಿಳೆಯರ ಆರೋಗ್ಯದ ಕುಶಾಲನಗರ: ಕುಶಾಲನಗರ ಸಮೀಪದ ಕೊಪ್ಪ ಮರಡಿಯೂರು ಗ್ರಾಮದ ಆಕ್ಸಿಲಿಯಂ ಕಾನ್ವೆಂಟ್ನಲ್ಲಿ ವಿಶ್ವ ಮಹಿಳಾ ದಿನಾಚರಣೆ ಅಂಗವಾಗಿ ವಿಶೇಷ ಕಾರ್ಯಕ್ರಮ ನಡೆಯಿತು. ಕಾರ್ಯಕ್ರಮದ ಮುಖ್ಯ ಅತಿಥಿಗಳಾಗಿ ಪಿರಿಯಾಪಟ್ಟಣದ ಕಾರ್ಯಕ್ರಮ ವ್ಯವಸ್ಥಾಪಕಿ ರೋಸಿ, ಶಿಕ್ಷಕಿ ಸ್ವಾತಿ ಮತ್ತಿತರರು ಪಾಲ್ಗೊಂಡಿದ್ದರು.
ಸ್ಥಳೀಯ 26 ಕ್ಕೂ ಅಧಿಕ ಸ್ವಸಹಾಯ ಸಂಘಗಳ ಮಹಿಳಾ ಸದಸ್ಯರು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು. ವಿವಿಧ ಆಟೋಟ ಸ್ಪರ್ಧೆಗಳಲ್ಲಿ ಪಾಲ್ಗೊಂಡು ವಿಜೇತರಾದವರಿಗೆ ಬಹುಮಾನ ವಿತರಣೆ ನಡೆಯಿತು.
ಕೂಡಿಗೆ: ಅಂತರರಾಷ್ಟ್ರೀಯ ಮಹಿಳಾ ದಿನಾಚರಣೆಯ ಅಂಗವಾಗಿ ಕೂಡುಮಂಗಳೂರು ಗ್ರಾ.ಪಂ. ಸಭಾಂಗಣದಲ್ಲಿ ವಿಶೇಷ ಮಹಿಳಾ ಗ್ರಾಮ ಸಭೆ ನಡೆಯಿತು.
ಮಹಿಳಾ ಗ್ರಾಮ ಸಭೆಯ ಅಧ್ಯಕ್ಷತೆಯನ್ನು ಕೂಡುಮಂಗಳೂರು ಗ್ರಾ.ಪಂ ಅಧ್ಯಕ್ಷೆ ಲಕ್ಷ್ಮಿ ರವಿ ವಹಿಸಿದ್ದರು. ವಿಶೇಷ ಆಹ್ವಾನಿತರಾಗಿ ಆಗಮಿಸಿದ ಚಿಕ್ಕತ್ತೂರು ಶಾಲಾ ಶಿಕ್ಷಕಿ ಶಶಿಕಲಾ ಮಹಿಳೆಯರ ಸ್ಥಾನಮಾನ ಗೌರವ ಹಕ್ಕುಗಳ ಬಗ್ಗೆ ಮಾಹಿತಿ ನೀಡಿದರು.
ಆರೋಗ್ಯ ಇಲಾಖೆಯ ಸಕೀನಾ ಮಾತನಾಡಿ, ಮಹಿಳೆಯರ ಆರೋಗ್ಯದ ಹಾಗೂ ಪೋಲಾಗದಂತೆ ನೋಡಿಕೊಳ್ಳಬೇಕೆಂದರು.
ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ವಿಶ್ವನಾಥ್ ಮಾತನಾಡಿ, ಪ್ಲಾಸ್ಟಿಕ್ ತ್ಯಾಜ್ಯಗಳಿಂದ ಪರಿಸರ ಮಾಲಿನ್ಯವಾಗುತ್ತಿದ್ದು, ಎಲ್ಲೆಂದರಲ್ಲಿ ಕಸ ಸುರಿಯದೆ ಹಸಿ ಕಸ-ಒಣ ಕಸ ವಿಂಗಡಿಸಿ ಪಂಚಾಯಿತಿಯ ವಾಹನಕ್ಕೆ ನೀಡಬೇಕೆಂದು ಮನವಿ ಮಾಡಿದ ಅವರು ಶುಚಿತ್ವವನ್ನು ಕಾಪಾಡಿಕೊಳ್ಳುವ ಮೂಲಕ ಸ್ವಚ್ಛ ಪರಿಸರ ಗ್ರಾಮವನ್ನಾಗಿ ಸಲು ಎಲ್ಲರೂ ಗ್ರಾಮ ಪಂಚಾಯಿತಿಯೊಂದಿಗೆ ಕೈಜೋಡಿಸಬೇಕೆಂದು ಮನವಿ ಮಾಡಿದರು.
ಗ್ರಾಮ ಪಂಚಾಯಿತಿ ಸದಸ್ಯೆ ದೇವಜಾನು ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿ, ಗ್ರಾಮದ ಅಭಿವೃದ್ಧಿಗೆ ಮಹಿಳೆಯರ ಪಾತ್ರ ಪ್ರಮುಖವಾದದ್ದು ಮಹಿಳೆಯರಿಗಾಗಿ ಹಲವಾರು ಯೋಜನೆಗಳನ್ನು ಸರ್ಕಾರಗಳು ನೀಡುತ್ತಿದ್ದು ಇದರ ಸದ್ಬಳಕೆ ಮಾಡಿಕೊಳ್ಳುವ ಮೂಲಕ ಅಭಿವೃದ್ಧಿಯೊಂದಿಗೆ ಸಮಾಜದ ಮುಖ್ಯವಾಹಿನಿಗೆ ಬರಬೇಕು ಎಂದರು.
ಈ ಸಂದರ್ಭ ಗ್ರಾಮ ಪಂಚಾಯಿತಿ ಸದಸ್ಯರಾದ ಶೌಕತ್ ಅಲಿ, ಪೂವಮ್ಮ ಸೇರಿದಂತೆ ಶಾಲಾ ಶಿಕ್ಷಕರುಗಳು, ಆಶಾ ಕಾರ್ಯಕರ್ತರು, ಅಂಗನವಾಡಿ ಕಾರ್ಯಕರ್ತರು ಸೇರಿದಂತೆ ವಿವಿಧ ಮಹಿಳಾ ಸಂಘಟನೆಗಳು ಕಾರ್ಯಕರ್ತರು ಭಾಗವಹಿಸಿದ್ದರು.