ಮಡಿಕೇರಿ, ಮಾ. 10: ಕೆಪಿಸಿಸಿ ಸಾಮಾಜಿಕ ಜಾಲತಾಣದ ವತಿಯಿಂದ “ಕರ್ನಾಟಕದ ಧ್ವನಿ” ಅಭಿಯಾನಕ್ಕೆ ಚಾಲನೆ ನೀಡಲಾಗಿದೆ ಎಂದು ಕಾಂಗ್ರೆಸ್ ಸಮಿತಿಯ ಸಾಮಾಜಿಕ ಜಾಲತಾಣ ವಿಭಾಗದ ಜಿಲ್ಲಾಧ್ಯಕ್ಷ ಸೂರಜ್ ಹೊಸೂರು ತಿಳಿಸಿದ್ದಾರೆ. ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷದ ಬಲವರ್ಧನೆಯಲ್ಲಿ ಸಾಮಾಜಿಕ ಜಾಲತಾಣದ ಪಾತ್ರ ಪ್ರಮುಖವಾಗಿದೆ. ಈ ಹಿನ್ನೆಲೆಯಲ್ಲಿ ಬೆಂಗಳೂರಿನಲ್ಲಿ “ಜಾಗೃತಿ ಕಾರ್ಯಾಗಾರ” ಕಾರ್ಯಕ್ರಮದಲ್ಲಿ ಕೊಡಗು ಜಿಲ್ಲೆಯಲ್ಲೂ ಪಕ್ಷವನ್ನು ಸಾಮಾಜಿಕ ಜಾಲತಾಣದ ಮೂಲಕ ಮತ್ತಷ್ಟು ಬಲಿಷ್ಠವಾಗಿ ಸಂಘಟಿಸಲು ನಿರ್ಧರಿಸಲಾಗಿದೆ ಎಂದು ತಿಳಿಸಿ ಕರ್ನಾಟಕದ ಧ್ವನಿ ಅಭಿಯಾನಕ್ಕಾಗಿ 90153 39966 ಮೊಬೈಲ್ ಸಂಖ್ಯೆ ಯನ್ನು ಬಳಸಿಕೊಳ್ಳಲಾಗುತ್ತಿದೆ ಎಂದು ಮಾಹಿತಿ ನೀಡಿದ್ದಾರೆ.