ಮಡಿಕೇರಿ, ಮಾ. 10: ಆರ್ಯ ವೈಶ್ಯ ಜನಾಂಗದವರಿಗೆ ಈ ಹಿಂದೆ ಜಾತಿ ಪ್ರಮಾಣ ಪತ್ರವನ್ನು ವಿದ್ಯಾಭ್ಯಾಸದ ಸಲುವಾಗಿ 18 ವರ್ಷ ಒಳಪಟ್ಟವರಿಗೆ ಮಾತ್ರ ನೀಡಲಾಗುತ್ತಿತ್ತು. 2019ರ ಡಿಸೆಂಬರ್ 16 ರಂದು ಕರ್ನಾಟಕ ರಾಜ್ಯ ಸರ್ಕಾರವು ಇನ್ನು ಮುಂದೆ ಆರ್ಯ ವೈಶ್ಯ ಜನಾಂಗದವರಿಗೆ ಶಾಲಾ ಪ್ರವೇಶಕ್ಕೆ ಮಾತ್ರವಲ್ಲದೆ ಸರ್ಕಾರಿ ಸಂಸ್ಥೆಗಳಿಂದ ಸಾಲ, ಸಹಾಯಧನ ಮತ್ತು ತರಬೇತಿ ಪಡೆಯಲು ಜಾತಿ ಮತ್ತು ಆದಾಯ ಪ್ರಮಾಣ ಪತ್ರವನ್ನು ನಮೂನೆ-ಜಿ ಯಲ್ಲಿ ಪಡೆಯಲು ಆದೇಶಿಸಿದ್ದು ಅರ್ಜಿ ಆಹ್ವಾನಿಸಲಾಗಿದೆ.
ಕರ್ನಾಟಕ ಆರ್ಯ ವೈಶ್ಯ ಸಮುದಾಯ ಅಭಿವೃದ್ಧಿ ನಿಗಮದಿಂದ ಮತ್ತು ಇತರ ಸರ್ಕಾರಿ ಸಂಸ್ಥೆಗಳಿಂದ ಸಾಲ ಸೌಲಭ್ಯಗಳನ್ನು ಪಡೆಯಲು ಜಾತಿ ಮತ್ತು ಆದಾಯ ಪ್ರಮಾಣ ಪತ್ರವು ಕಡ್ಡಾಯವಾಗಿರುತ್ತದೆ. ಆರ್ಯ ವೈಶ್ಯ ಸಮುದಾಯದವರು ಜಾತಿ ಮತ್ತು ಆದಾಯ ಪ್ರಮಾಣ ಪತ್ರವನ್ನು ನಮೂನೆ-ಜಿ ಯಲ್ಲಿ ಪಡೆಯಲು ನಾಡಕಚೇರಿ ಕೇಂದ್ರ, ಬೆಂಗಳೂರು-ಒನ್, ಕರ್ನಾಟಕ-ಒನ್, ಹಾಗೂ ನಾಡ ಕಚೇರಿಯ ಅಂತರ್ಜಾಲ ತಿತಿತಿ.ಟಿಚಿಜಚಿಞಚಿಛಿheಡಿi. ಞಚಿಡಿಟಿಚಿಣಚಿಞಚಿ.gov.iಟಿ ಇಲ್ಲಿ ಅರ್ಜಿ ಸಲ್ಲಿಸಬಹುದು. ಹೆಚ್ಚಿನ ಮಾಹಿತಿಗೆ ನಿಗಮದ ಸಹಾಯವಾಣಿ +919448451111/ಇ-ಮೇಲ್: suಠಿಠಿoಡಿಣ.ಞಚಿಛಿಜಛಿ@ ಞಚಿಡಿಟಿಚಿಣಚಿಞಚಿ.gov.iಟಿ ಅಥವಾ ನಾಡ ಕಚೇರಿಯ ಸಹಾಯವಾಣಿ: 18005990044 ನ್ನು ಸಂಪರ್ಕಿಸಬಹುದು ಎಂದು ಕರ್ನಾಟಕ ಆರ್ಯವೈಶ್ಯ ಸಮುದಾಯ ಅಭಿವೃದ್ಧಿ ನಿಗಮದ ಜಿಲ್ಲಾ ವ್ಯವಸ್ಥಾಪಕರು ತಿಳಿಸಿದ್ದಾರೆ.