ಶನಿವಾರಸಂತೆ, ಮಾ. 9: ಸಮೀಪದ ಕೊಡ್ಲಿಪೇಟೆಯ ಕಂದಾಯ ಇಲಾಖೆಯಲ್ಲಿ ಆಧಾರ್ ಕಾರ್ಡ್ ನೋಂದಣಿ ಹಾಗೂ ತಿದ್ದುಪಡಿ ಕಾರ್ಯ ನಡೆಯುತ್ತಿಲ್ಲ ಎಂದು ಅಲ್ಲಿನ ಗ್ರಾಹಕರು, ಸಾರ್ವಜನಿಕರು ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ಶನಿವಾರಸಂತೆಯ ಅಂಚೆ ಇಲಾಖೆ ವತಿಯಿಂದ ಆಧಾರ್ ಶಿಬಿರ, ಅಂಚೆ ಮೇಳ ನಡೆಸಿದಂತೆ ಕೊಡ್ಲಿಪೇಟೆ ಅಂಚೆ ಕಚೇರಿಯಲ್ಲೂ ಆಧಾರ್ ಶಿಬಿರ ನಡೆಸಬೇಕು ಎಂದು ಆಗ್ರಹಿಸಿರುವ ವಾಣಿಜ್ಯೋದ್ಯಮಿಗಳ ಸಂಘದ ಅಧ್ಯಕ್ಷ ಎಚ್.ಸಿ. ಯತೀಶ್ ಕುಮಾರ್, ಜಿಲ್ಲಾ ನಿರ್ದೇಶಕ ಜಿ.ಆರ್. ಸುಬ್ರಮಣ್ಯ, ಜಿಲ್ಲಾಧಿಕಾರಿಗಳು ಸಮಸ್ಯೆ ಪರಿಹಾರಕ್ಕೆ ಶೀಘ್ರ ಕ್ರಮಕೈಗೊಳ್ಳುವಂತೆ ಕೋರಿದ್ದಾರೆ.