ಮಡಿಕೇರಿ, ಮಾ. 10: ರಾಷ್ಟ್ರೀಯ ಸಫಾಯಿ ಕರ್ಮಚಾರಿ ಆಯೋಗದ ಸದಸ್ಯ ಜಗದೀಶ್ ಹಿರೇಮಣಿ ತಾ. 13 ರಂದು ಕೊಡಗು ಜಿಲ್ಲಾ ಪ್ರವಾಸ ಕಾರ್ಯಕ್ರಮ ಹಮ್ಮಿಕೊಂಡಿದ್ದಾರೆ.

ಮಧ್ಯಾಹ್ನ 3 ಗಂಟೆಗೆ ಜಿಲ್ಲಾಧಿಕಾರಿ ಕಚೇರಿಯಲ್ಲಿ ನಗರಸಭಾ ಆಯುಕ್ತರು, ಪಟ್ಟಣ ಪಂಚಾಯಿತಿ ಮುಖ್ಯಾಧಿಕಾರಿಗಳು ಹಾಗೂ ಸಂಬಂಧಪಟ್ಟ ಇಲಾಖಾ ಅಧಿಕಾರಿಗಳು ಮತ್ತು ಸಫಾಯಿ ಕರ್ಮಚಾರಿ ಮುಖ್ಯಸ್ಥರೊಂದಿಗೆ ಸಭೆ ನಡೆಸಲಿದ್ದಾರೆ.