ಕುಶಾಲನಗರ, ಮಾ. 10: ಇತ್ತೀಚೆಗೆ ದಾರವಾಡದಲ್ಲಿ ನಡೆದ ಕರ್ನಾಟಕ ರಾಜ್ಯ ಸರಕಾರಿ ನೌಕರರ ಕ್ರೀಡಾಕೂಟದಲ್ಲಿ 40 ರಿಂದ 50 ವಯೋಮಾನದವರ ಈಜು ಸ್ಪರ್ಧೆಯಲ್ಲಿ ಮಡಿಕೇರಿ ಸಮೀಪದ ಕೆ. ನಿಡುಗಣೆ ಗ್ರಾಮ ಪಂಚಾಯಿತಿಯಲ್ಲಿ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಯಾಗಿ ಕರ್ತವ್ಯ ನಿರ್ವಹಿಸುತ್ತಿರುವ ಡಿ. ನಂಜುಂಡಸ್ವಾಮಿ ಅವರು ಪ್ರಥಮ ಸ್ಥಾನಗಳಿಸಿ ಚಿನ್ನದ ಪದಕವನ್ನು ಪಡೆದು ಇದೀಗ ರಾಷ್ಟ್ರಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ಇವರು ಮೂಲತಃ ಚಾಮರಾಜನಗರ ಜಿಲ್ಲೆಯವರಾಗಿದ್ದು, ತಮ್ಮ ಸೇವೆಯನ್ನು ಕೊಡಗು ಜಿಲ್ಲೆಯ ವೀರಾಜಪೇಟೆ ತಾಲೂಕಿನ ಮಾಯಮುಡಿ ಪಂಚಾಯಿತಿ. ಕಾನೂರು ಪಂಚಾಯಿತಿ. ಕುಟ್ಟ ಪಂಚಾಯಿತಿ ಹಾಗೂ ಸೋಮವಾರಪೇಟೆ ತಾಲೂಕಿನ ನೆಲ್ಲಿಹುದಿಕೇರಿಯಲ್ಲಿ ಅಭಿವೃದ್ಧಿ ಅಧಿಕಾರಿಯಾಗಿ ಕರ್ತವ್ಯ ನಿರ್ವಹಿಸಿದ್ದು, ಇದೀಗ ಮಡಿಕೇರಿ ತಾಲೂಕಿನ ಕೆ. ನಿಡುಗಣೆ ಪಂಚಾಯಿತಿಯಲ್ಲಿ ಅಭಿವೃದ್ಧಿ ಅಧಿಕಾರಿಯಾಗಿ ಕರ್ತವ್ಯ ನಿರ್ವಹಿಸುತ್ತಿದ್ದಾರೆ.