ಕೂಡಿಗೆ, ಮಾ. 10: ಹಾರಂಗಿ ಅಣೆಕಟ್ಟೆಯಿಂದ ಕೊಡಗಿನ ಗಡಿಭಾಗ ಶಿರಂಗಾಲದವರೆಗೆ ಹಾರಂಗಿ ಮುಖ್ಯ ನಾಲೆಯಲ್ಲಿ ನೀರು ಹರಿಯುತ್ತದೆ. ಅದಕ್ಕೆ ಹೊಂದಿಕೊಂಡಂತೆ ಇರುವ ನಾಲೆಯ ಉಪ ರಸ್ತೆಯ ದುರಸ್ತಿ ಕಾರ್ಯ ಆಗಬೇಕಾಗಿದೆ. ನಾಲೆ ಸಮೀಪದ ಉಪರಸ್ತೆಯನ್ನು ಈಗಾಗಲೇ ಹಲವರು ಒತ್ತುವರಿ ಮಾಡಿಕೊಂಡಿರುವುದರಿಂದ ಆಯಾ ವ್ಯಾಪ್ತಿಯ ತಮ್ಮ ತಮ್ಮ ಜಮೀನಿಗೆ ತೆರಳಲು ಕಷ್ಟವಾಗುತ್ತಿರುವ ಬಗ್ಗೆ ಸಂಬಂಧ ಪಟ್ಟ ನೀರಾವರಿ ಇಲಾಖೆಗೆ ಅರ್ಜಿ ಸಲ್ಲಿಸಿದ್ದರೂ ಸ್ಪಂದನ ದೊರೆತಿಲ್ಲ ಆದ್ದರಿಂದ ಕೂಡಲೇ ಕಾವೇರಿ ನೀರಾವರಿ ಇಲಾಖೆ ಈ ಬಗ್ಗೆ ತುರ್ತು ಕ್ರಮ ಕೈಗೊಳ್ಳಬೇಕೆಂದು ರೈತರು ಆಗ್ರಹಿಸಿದ್ದಾರೆ.