x

ಕುಶಾಲನಗರ, ಮಾ. 10: ಕೊಡಗು ಜಿಲ್ಲಾ ಪದವಿಪೂರ್ವ ಕಾಲೇಜುಗಳ ಉಪನ್ಯಾಸಕರು ಮತ್ತು ಪ್ರಾಂಶುಪಾಲರ ಸಂಘದ ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಉಪನ್ಯಾಸಕರು ಕಪ್ಪು ಪಟ್ಟಿ ಧರಿಸಿ ಮೌನ ಪ್ರತಿಭಟನೆ ಮೂಲಕ ಪರೀಕ್ಷಾ ಕೇಂದ್ರಗಳಲ್ಲಿ ಕರ್ತವ್ಯ ನಿರ್ವಹಿಸಿದರು.

ದ್ವಿತೀಯ ಪಿ.ಯು. ವಿದ್ಯಾರ್ಥಿಗಳ ಪರೀಕ್ಷೆ ಬುಧವಾರದಿಂದ ಆರಂಭಗೊಂಡಿದ್ದು, ಕುಶಾಲನಗರ ಕನ್ನಡ ಭಾರತಿ ಕಾಲೇಜಿನಲ್ಲಿ ಪರೀಕ್ಷಾ ಕಾರ್ಯಕ್ಕೆ ಹಾಜರಾದ ಶಿಕ್ಷಕರು ರಾಜ್ಯ ಸಂಘದ ಕರೆಯ ಮೇರೆಗೆ ಪರೀಕ್ಷೆ ಆರಂಭಕ್ಕೂ ಮುನ್ನ ಸಾಂಕೇತಿಕವಾಗಿ ಮೌನ ಪ್ರತಿಭಟನೆ ನಡೆಸಿದರು.

ಈ ಬಗ್ಗೆ ಸಂಘದ ಪ್ರಧಾನ ಕಾರ್ಯದರ್ಶಿ ಹಂಡ್ರಂಗಿ ನಾಗರಾಜ್, ಸರಕಾರ ತಕ್ಷಣ ಕುಮಾರ್ ನಾಯಕ್ ವರದಿ ಜಾರಿಗೊಳಿಸಬೇಕು, ವೇತನ ತಾರತಮ್ಯ ನಿವಾರಿಸಬೇಕು ಎಂಬಿತ್ಯಾದಿ 24 ಬೇಡಿಕೆಗಳ ಈಡೇರಿಸುವಂತೆ ಶಿಕ್ಷಣ ಇಲಾಖೆ ಸಚಿವರು, ಅಧಿಕಾರಿಗಳೊಂದಿಗೆ ಚರ್ಚಿಸಲಾಗಿದೆ. ಬೇಡಿಕೆ ಈಡೇರಿಕೆಗೆ ಒತ್ತಾಯಿಸಿ ಹಂತಹಂತವಾಗಿ ಪ್ರತಿಭಟನೆ ನಡೆಸಲಾಗುತ್ತಿದೆ. ಎಂದು ಎಚ್ಚರಿಸಿದರು. ಉಪನ್ಯಾಸಕರುಗಳಾದ ಮಹೇಶ್‍ಕುಮಾರ್, ಎನ್. ಆದರ್ಶ್, ಎಸ್.ಆರ್. ವೆಂಕಟೇಶ್, ಸರೋಜಾ, ಕೆ.ಎ. ವೀಣಾ, ಸೂಜಿ, ಕಾಂತರಾಜ್ ಇದ್ದರು.