ನಾಪೆÇೀಕ್ಲು, ಮಾ. 10: ಗುಜರಾತ್ ರಾಜ್ಯದ ವಲ್‍ಸದ್ ಜಿಲ್ಲೆಯಲ್ಲಿ ಉತ್ತಮವಾಗಿ ಕಾರ್ಯನಿರ್ವಹಿಸುತ್ತಿರುವ ಸೆಂಟ್ರಲ್ ಕೋ ಆಪರೇಟಿವ್ ಬ್ಯಾಂಕ್‍ನ ಸದಸ್ಯರು ಕರ್ನಾಟಕ ಅಪೆಕ್ಸ್ ಬ್ಯಾಂಕ್ ಮತ್ತು ಜಿಲ್ಲೆಯ ಡಿ.ಸಿ.ಸಿ. ಬ್ಯಾಂಕ್‍ನ ಸದಸ್ಯರು ಜಿಲ್ಲೆಯಲ್ಲಿ ಉತ್ತಮವಾಗಿ ಕಾರ್ಯನಿರ್ವಹಿಸುತ್ತಿರುವ ಕಾರುಗುಂದ ಕೃಷಿ ಪತ್ತಿನ ಸಹಕಾರ ಸಂಘಕ್ಕೆ ಭೇಟಿ ನೀಡಿದರು. ಇವರ ಸಾಧನೆಯ ಬಗ್ಗೆ ಅಭಿಪ್ರಾಯ ಸಂಗ್ರಹಿಸಿದರು. ಈ ಸಂದರ್ಭ ಕಾರುಗುಂದ ಕೃಷಿ ಪತ್ತಿನ ಸಂಘದ ಅಧ್ಯಕ್ಷ ನಾಪಂಡ ರ್ಯಾಲಿ ಮಾದಯ್ಯ, ಉಪಾಧ್ಯಕ್ಷ ತಿಮ್ಮಯ್ಯ, ಸಂಘದ ಕಾರ್ಯನಿರ್ವಾಹಣಾಧಿಕಾರಿ ಕಾವೇರಮ್ಮ ಮತ್ತಿತರರು ಇದ್ದರು.