ಕೂಡಿಗೆ, ಮಾ, 10: ಅಂಗನವಾಡಿ ಕೇಂದ್ರಗಳಲ್ಲಿ ಮಕ್ಕಳಿಗೆ ಪಾಠದೊಂದಿಗೆ ಆಟಕ್ಕೆ ಹೆಚ್ಚು ಒತ್ತು ಕೊಡುವುದರ ಮೂಲಕ ಮಕ್ಕಳಲ್ಲಿ ಬಾಲ್ಯದಿಂದಲೇ ಬೌದ್ಧಿಕ ಬೆಳವಣಿಗೆಗೆ ಸಹಕಾರಿಯಾಗುತ್ತದೆ. ಇತ್ತ ಅಂಗನವಾಡಿ ಶಿಕ್ಷಕರು ಹೆಚ್ಚು ಗಮನ ಹರಿಸಬೇಕು ಎಂದು ಶಾಸಕ ಎಂ.ಪಿ. ಅಪ್ಪಚ್ಚು ರಂಜನ್ ಸಲಹೆ ನೀಡಿದರು.
ಕೂಡಿಗೆ ಗ್ರಾ.ಪಂ ವ್ಯಾಪ್ತಿಯ ಭುವನಗಿರಿ ಗ್ರಾಮದಲ್ಲಿ ನೂತನವಾಗಿ ಎಂಟುವರೆ ಲಕ್ಷ ರೂ. ವೆಚ್ಚದ ಅಂಗನವಾಡಿ ಕಟ್ಟಡ ಉದ್ಘಾಟನೆ ನೆರವೇರೀಸಿ ಮಾತನಾಡಿದ ಶಾಸಕ ಅಪ್ಪಚ್ಚು ರಂಜನ್, ಗ್ರಾ.ಪಂ ವ್ಯಾಪ್ತಿಗಳಲ್ಲಿ ಮಕ್ಕಳಿಗೆ ಎಲ್ಲಾ ರೀತಿಯ ಅನುಕೂಲವಾಗುವಂತೆ ಸುಸಜ್ಜಿತ ಕಟ್ಟಡಗಳನ್ನು ನಿರ್ಮಿಸಿಕೊಡಲಾಗುತ್ತದೆ. ಇದನ್ನು ಉತ್ತಮ ರೀತಿಯಲ್ಲಿ ನಿರ್ವಹಣೆ ಮಾಡಿಕೊಂಡು ಮಕ್ಕಳತ್ತ ಹೆಚ್ಚು ಗಮನಹರಿಸಬೇಕು ಎಂದು ತಿಳಿಸಿದರು.
ಮುಖ್ಯ ಅತಿಥಿಯಾಗಿ ಆಗಮಿಸಿದ ಜಿ.ಪಂ. ಉಪಾಧ್ಯಕ್ಷೆ ಲೋಕೇಶ್ವರಿ ಗೋಪಾಲ್, ಜಿ.ಪಂ. ಸದಸ್ಯೆ ಮಂಜುಳಾ ಮಾತನಾಡಿದರು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕೂಡಿಗೆ ಗ್ರಾ.ಪಂ ಅಧ್ಯಕ್ಷೆ ಪ್ರೇಮಲೀಲಾ ವಹಿಸಿದ್ದರು. ಈ ಸಂದರ್ಭ ಗ್ರಾ.ಪಂ. ಸದಸ್ಯರುಗಳಾದ ಮೋಹಿನಿ, ರತ್ನಮ್ಮ, ಪುಷ್ಪಾ, ಜಯಶ್ರೀ, ಚಂದ್ರಿಕಾ, ಕೆ.ಜೆ. ಮಂಜು, ಕೆ.ಎ. ದಸ್ವಿ ಹಾಗೂ ಗ್ರಾ.ಪಂ. ಅಭಿವೃದ್ಧಿ ಅಧಿಕಾರಿ ಶಿಲ್ಪ ಹಾಗೂ ಸಿಬ್ಬಂದಿ ಇದ್ದರು.