ವ್ಯಕ್ತಿ ಆತ್ಮಹತ್ಯೆ
ಸಿದ್ದಾಪುರ, ಮಾ. 9: ತನ್ನ ಅಜ್ಜಿ ನಿಧನ ಹೊಂದಿದರು ಎಂದು ಮನನೊಂದು ವ್ಯಕ್ತಿಯೋರ್ವ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಸಿದ್ದಾಪುರ ಸಮೀಪದ ಬಾಡಗ ಬಾಣಂಗಾಲ ಗ್ರಾಮದಲ್ಲಿ ನಡೆದಿದೆ. ಹುಂಡಿ ಸಮೀಪದ ಮಾರ್ಗದಲ್ಲಿ ಕಾಫಿ ತೋಟದಲ್ಲಿ ವಾಸ ಮಾಡಿಕೊಂಡಿದ್ದ ಕಾರ್ಮಿಕ ಮೂಲತಃ ವೆಸ್ಟ್ಬಂಗಾಳ ನಿವಾಸಿ ಸಪನ್ ರಾಯ್ (39) ಎಂಬಾತ ಮೃತಪಟ್ಟ ವ್ಯಕ್ತಿ. ಈತನ ಅಜ್ಜಿ ಕಳೆದ ಮೂರು ದಿನಗಳ ಹಿಂದೆ ಅನಾರೋಗ್ಯದಿಂದ ಮೃತಪಟ್ಟಿದ್ದರು ಎನ್ನಲಾಗಿದೆ. ಇದರಿಂದ ಮನನೊಂದು ಈತ ಕಾಫಿ ತೋಟದೊಳಗೆ ಕಾಫಿ ಗಿಡಕ್ಕೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಈ ಬಗ್ಗೆ ಸಿದ್ದಾಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಮೃತ ವ್ಯಕ್ತಿ ಪತ್ನಿ ಹಾಗೂ ಮೂವರು ಮಕ್ಕಳನ್ನು ಅಗಲಿದ್ದಾರೆ. ಸಿದ್ದಾಪುರ ಪೊಲೀಸರು ಮುಂದಿನ ಕ್ರಮ ಕೈಗೊಂಡಿದ್ದಾರೆ.