ಮಡಿಕೇರಿ, ಮಾ. 10: ವಿದ್ಯಾರ್ಥಿಗಳಿಗೆ ವೃತ್ತಿ ಜೀವನಕ್ಕೆ ಬೇಕಾದ ವಿವಿಧ ವಿಷಯಗಳಾದ ಸಂದರ್ಶನವನ್ನು ಹೇಗೆ ಎದುರಿಸಬೇಕು ಮತ್ತು ಸ್ವಂತ ಉದ್ಯೋಗವನ್ನು ಹೇಗೆ ರೂಪಿಸಿಕೊಳ್ಳಬೇಕು ಎಂಬುದರ ಬಗ್ಗೆ ಯುವ ಜನರು ತಿಳಿದುಕೊಳ್ಳಬೇಕು ಎಂದು ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ವೀರಾಜಪೇಟೆ ಶಾಖೆಯ ವ್ಯವಸ್ಥಾಪಕ ಆನಂದನ್ ಆರ್. ಗುರುಸ್ವಾಮಿ ಹೇಳಿದರು.

ಪ್ರಸಕ್ತ 2019-20ನೇ ಸಾಲಿನ ವಾಣಿಜ್ಯ ಮತ್ತು ನಿರ್ವಹಣಾ ಶಾಸ್ತ್ರ ವಿಭಾಗದ ವತಿಯಿಂದ ವೀರಾಜಪೇಟೆಯ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಚಿಕ್ಕಪೇಟೆಯ ವಾಣಿಜ್ಯ ವಿಭಾಗದದಲ್ಲಿ ಒಂದು ದಿನದ ರಾಜ್ಯ ಮಟ್ಟದ ಲುಮಿನೆನ್ಸ್ ಹಬ್ಬ ನಡೆಯಿತು.

ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಅವರು, ವಿದ್ಯಾರ್ಥಿಗಳು ಸಂವಹನ ಕೌಶಲ್ಯ ಅಭಿವೃದ್ಧಿ ಪಡಿಸಿಕೊಳ್ಳುವುದು ಮತ್ತು ವಿದ್ಯಾರ್ಥಿಗಳು ಸೃಜನಶೀಲರಾಗುವುದು ಹೇಗೆ ಎಂಬುದರ ಬಗ್ಗೆ ವಿದ್ಯಾರ್ಥಿಗಳು ತಿಳಿದುಕೊಳ್ಳಬೇಕು. ಈ ರೀತಿಯ ಕಾರ್ಯಕ್ರಮಗಳ ಸದುಪಯೋಗ ಪಡೆದು ಸ್ವ-ಉದ್ಯೋಗದಿಂದ ಉತ್ತಮ ಭವಿಷ್ಯವನ್ನು ರೂಪಿಸಿಕೊಂಡು ಆರ್ಥಿಕವಾಗಿ ಸದೃಢವಾಗುವತ್ತ ಶ್ರಮವಹಿಸಬೇಕು ಎಂದು ಹೇಳಿದರು.

ಕಾಲೇಜಿನ ಪ್ರಾಂಶುಪಾಲ ಡಾ. ಟಿ.ಕೆ. ಬೋಪಯ್ಯ ಅವರು ಲುಮಿನೆನ್ಸ್ ಪ್ರೋಮೊವನ್ನು ಬಿಡುಗಡೆ ಮಾಡಿ ಮಾತನಾಡಿ, ಈ ಕಾರ್ಯಕ್ರಮದಲ್ಲಿ ಸೃಜನಶೀಲ ಚಿಂತನೆ ಮತ್ತು ನೈಜ ವ್ಯಾಪಾರದ ಜಗತ್ತಿನ ಬಗ್ಗೆ ಅರಿವು ಮೂಡುತ್ತದೆ ವಿದ್ಯಾರ್ಥಿಗಳು ನೈಜ್ಯ ಪ್ರತಿಭೆಯನ್ನು ಪ್ರದರ್ಶಿಸಲು ಇದು ಉತ್ತಮ ವೇದಿಕೆಯಾಗಿದ್ದು. ಈ ಕಾರ್ಯಕ್ರಮದ ಮೂಲಕ ವಿದ್ಯಾರ್ಥಿಗಳು ತಮ್ಮ ಸಾಮಥ್ರ್ಯವನ್ನು ತಿಳಿದುಕೊಳ್ಳಬಹುದು ಎಂದು ಅವರು ಹೇಳಿದರು.

ಕಾರ್ಯಕ್ರಮ ಸಂಯೋಜಕ ನಿರ್ವಹಣಾ ಶಾಸ್ತ್ರ ವಿಭಾಗದ ಮುಖ್ಯಸ್ಥರು ಹಾಗೂ ಸಹಾಯಕ ಪ್ರಾಧ್ಯಾಪಕ ಮಂಜುನಾಥ್ ಆರ್. ಮಾತನಾಡಿ, ಈ ಕಾರ್ಯಕ್ರಮದಲ್ಲಿ ಅಣುಕು ಸಂದರ್ಶನ, ಬಿಸ್‍ನೆಸ್ ಸ್ಟಾರ್ಟ್‍ಅಪ್, ರೆಸ್ಯುಮ್ ರೈಟಿಂಗ್, ಟ್ರೇಶರ್ ಹಂಟ್, ಬೆಸ್ಟ್ ಎಕ್ಸಿಕ್ವಿಟಿವ್ ಲುಕ್ ಮತ್ತು ಇತರ ಸ್ಪರ್ಧೆಗಳು ನಡೆಯಲಿದೆ ಎಂದು ತಿಳಿಸಿದರು.

ಕೊಡಗು ಜಿಲ್ಲೆ ಸೇರಿದಂತೆ ನೆರೆಯ ಜಿಲ್ಲೆಗಳ ಸುಮಾರು 16 ಕಾಲೇಜುಗಳ ವಿದ್ಯಾರ್ಥಿಗಳ ತಂಡಗಳು ಭಾಗವಹಿಸಿದರು. ಕಾರ್ಯಕ್ರಮದಲ್ಲಿ ವಾಣಿಜ್ಯಶಾಸ್ತ್ರ ವಿಭಾಗದ ಮುಖ್ಯಸ್ಥರಾದ ವೇಣುಗೋಪಾಲ್ ಹೆಚ್.ಎಸ್., ಸಹಾಯಕ ಪ್ರಾಧ್ಯಾಪಕರಾದ ಸುನೀತಾ ಎಂ.ಎಂ., ಗುರುಪ್ರಸಾದ್ ಎನ್., ಕಾಲೇಜಿನ ಭೋದಕ-ಭೋದಕೇತರ ವೃಂದದವರು, ವಿದ್ಯಾರ್ಥಿಗಳು, ಹಳೆ ವಿದ್ಯಾರ್ಥಿ ಸಂಘದ ಪದಾಧಿಕಾರಿಗಳು ಮತ್ತು ಪೋಷಕರು ಮತ್ತು ಇತರರು ಪಾಲ್ಗೊಂಡಿದ್ದರು. ವಿದ್ಯಾರ್ಥಿನಿ ಅನುಷಾ ಅವರು ಸ್ವಾಗತಿಸಿದರು, ವಿದ್ಯಾರ್ಥಿನಿ ಆತ್ಯಬಾನು ಅವರು ವಂದಿಸಿದರು, ವಿದ್ಯಾರ್ಥಿನಿ ರಸ್ಮಿಯಾ ಅವರು ನಿರೂಪಿಸಿದರು. ಶೋಭಿತಾ ಮತ್ತು ತಂಡದವರು ಪ್ರಾರ್ಥಿಸಿದರು.