ಕೂಡಿಗೆ, ಮಾ. 9: ಹರಕೆ ಚೌಡೇಶ್ವರಿ ದೇವಿ ಮತ್ತು ನಾಗದೇವರ ವಾರ್ಷಿಕೋತ್ಸವವು ಹರಕೆ ಚೌಡೇಶ್ವರಿ ದೇವಿ ದೇವಾಲಯ ಸಮಿತಿಯ ವತಿಯಿಂದ ತಾ. 13 ರಂದು ದೇವಾಲಯದ ಆವರಣದಲ್ಲಿ ನಡೆಯಲಿದೆ. ಅಂದು ಬೆಳಗ್ಗೆ ಗಣಪತಿ ಹೋಮ ದುರ್ಗಾ ಹೋಮ ಕಲಾವೃದ್ಧಿ ಹೋಮ ದೇವಿಗೆ ವಿವಿಧ ಅಭಿಷೇಕ ಸೇರಿದಂತೆ ಪೂಜಾ ಕಾರ್ಯಕ್ರಮ. 12 ಗಂಟೆಗೆ ಮಹಾಮಂಗಳಾರತಿ ನಡೆಯಲಿದೆ. ಮಧ್ಯಾಹ್ನ ಅನ್ನದಾನ ಸಂತರ್ಪಣೆ ನಡೆಯಲಿದೆ. ಸಂಜೆ 7.30ಕ್ಕೆ ದೇವಾಲಯ ಆವರಣದಲ್ಲಿ ದೀಪಾಲಂಕಾರ ಮತ್ತು ವಿಶೇಷ ಪೂಜಾ ಕಾರ್ಯಕ್ರಮ ತೀರ್ಥಪ್ರಸಾದ ವಿತರಣಾ ಕಾರ್ಯ ನಡೆಯಲಿದೆ ಎಂದು ದೇವಾಲಯ ಸಮಿತಿಯ ಅಧ್ಯಕ್ಷ ಕೆ.ಸಿ. ರವಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.