ನಾಪೆÇೀಕ್ಲು, ಮಾ. 9: ಅಪರಿಚಿತ ವ್ಯಕ್ತಿಗಳು ಸ್ಥಳೀಯ ವ್ಯಕ್ತಿ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿರುವ ಘಟನೆ ನಾಪೆÇೀಕ್ಲು ಪೆÇಲೀಸ್ ಠಾಣಾ ವ್ಯಾಪ್ತಿಯ ಎಮ್ಮೆಮಾಡು ಗ್ರಾಮದಲ್ಲಿ ಭಾನುವಾರ ರಾತ್ರಿ ನಡೆದಿದೆ.
ಎಮ್ಮೆಮಾಡು ಗ್ರಾಮದ ಚಂಬರಂಡ ಮೊಯ್ದು ಹಲ್ಲೆಗೊಳಗಾಗಿ ಮಂಗಳೂರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಮೊಯ್ದು ಎಮ್ಮೆಮಾಡು ಮಸೀದಿಯಲ್ಲಿ ಪ್ರಾರ್ಥನೆ ಮುಗಿಸಿ ಭಾನುವಾರ ಮಧ್ಯರಾತ್ರಿ ಮನೆಗೆ ತೆರಳುವ ಸಂದರ್ಭ ಎರಡು ಬೈಕ್‍ನಲ್ಲಿ ಬಂದ ದುಷ್ಕರ್ಮಿಗಳು ಅವರ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿ ಪರಾರಿಯಾಗಿದ್ದಾರೆ. ಈ ಬಗ್ಗೆ ನಾಪೆÇೀಕ್ಲು ಪೆÇಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.