ಮಡಿಕೇರಿ, ಮಾ. 11: ವೀರಾಜಪೇಟೆಯ ಕಾವೇರಿ ಪದವಿ ಕಾಲೇಜಿನ ಪುರುಷರ ಕ್ರಿಕೆಟ್ ತಂಡವು ಮೈಸೂರಿನಲ್ಲಿ ಮಹಾರಾಜ ಕಾಲೇಜ್ ಆಯೋಜಿಸಿದ ರಾಜ್ಯ ಮಟ್ಟದ ಟೆನ್ನಿಸ್ ಬಾಲ್ ಕ್ರಿಕೆಟ್ ಪಂದ್ಯಾವಳಿಯಲ್ಲಿ ಮೂರನೇ ಸ್ಥಾನ ಪಡೆದಿದೆ ಎಂದು ಕಾಲೇಜಿನ ಪ್ರಾಂಶುಪಾಲರಾದ ಇಟ್ಟಿರ ಕಮಲಾಕ್ಷಿ ತಿಳಿಸಿದ್ದಾರೆ.