ಗುಡ್ಡೆಹೊಸೂರು, ಮಾ. 11: ಗ್ರಾಮ ಪಂಚಾಯಿತಿಯ ಗ್ರಾಮ ಸಭೆಯು ಇಲ್ಲಿನ ಸಮುದಾಯ ಭವನದಲ್ಲಿ ನಡೆಯಿತು. ನೋಡಲ್ ಅಧಿಕಾರಿ ಕಾವ್ಯ ಉಪಸ್ಥಿತರಿದ್ದರು. ಗ್ರಾ.ಪಂ. ಅಧ್ಯಕ್ಷೆ ಕೆ.ಎಸ್. ಭಾರತಿ ಅಧ್ಯಕ್ಷತೆಯಲ್ಲಿ ಸಭೆ ನಡೆಯಿತು.
ಈ ಸಂದರ್ಭ ಪಿ.ಡಿ.ಓ. ಶ್ಯಾಂ ಸ್ವಾಗತಿಸಿದರು. ಸಭೆಯಲ್ಲಿ ಪಂಚಾಯಿತಿ ಉಪಾಧ್ಯಕ್ಷೆ ಲೀಲಾವತಿ, ಸದಸ್ಯರಾದ ಹೇಮಾವತಿ, ಕವಿತಾ, ಡಾಟಿ, ಪುಷ್ಪ, ಬಸವನಹಳ್ಳಿ ಪ್ರೌಢಶಾಲಾ ಶಿಕ್ಷಕ ಲಕ್ಷ್ಮಣ ಹಾಜರಿದ್ದರು.
ನಂಜರಾಯಪಟ್ಟಣ ವಿಭಾಗದ ಆರೋಗ್ಯ ನಿರೀಕ್ಷಕ ಲೋಕೇಶ್ ಮಾತನಾಡಿ, ಕೊರೊನಾ ವೈರಸ್ ಬಗ್ಗೆ ಮಾಹಿತಿ ನೀಡಿ, ಯಾವ ರೀತಿ ತಡೆಗಟ್ಟಬಹುದು ಎಂಬುದನ್ನು ತಿಳಿಸಿದರು. ಆರೋಗ್ಯ ಕಾರ್ಯಕರ್ತೆ ಭವಾನಿ ಮಹಿಳಾ ಆರೋಗ್ಯದ ಬಗ್ಗೆ ತಿಳಿಸಿದರು. ಕಾರ್ಯಕ್ರಮದಲ್ಲಿ ಆಶಾ ಕಾರ್ಯಕರ್ತೆಯರು ಮತ್ತು ಅಂಗನವಾಡಿ ಕಾರ್ಯಕರ್ತೆಯರು ಮತ್ತು ಗ್ರಾ.ಪಂ. ಕಾರ್ಯದರ್ಶಿ ನಂಜುಂಡೇಸ್ವಾಮಿ ಮುಂತಾದವರು ಉಪಸ್ಥಿತರಿದ್ದರು.