ಮಡಿಕೇರಿ, ಮಾ. 11: ಕೊಡಗು ಗೌಡ ನಿವೃತ್ತ ನೌಕರರ ಸಂಘದ ವತಿಯಿಂದ ಗೌಡ ಜನಾಂಗ ಬಾಂಧವರಿಗಾಗಿ ವರ್ಷಂಪ್ರತಿ ವಧು - ವರರ ಸಮಾವೇಶ ಹಮ್ಮಿಕೊಳ್ಳಲಾಗುತ್ತಿದೆ. ಈ ಸಂಬಂಧ ಆಸಕ್ತರು ಪ್ರತಿ ಸೋಮವಾರ ಬೆಳಿಗ್ಗೆ 10 ಗಂಟೆಯಿಂದ ಮಧ್ಯಾಹ್ನ 1.30 ಗಂಟೆವರೆಗೆ ಮಡಿಕೇರಿಯ ಕೊಡಗು ಗೌಡ ಸಮಾಜದ ಕಟ್ಟಡದಲ್ಲಿರುವ ಸಂಘದ ಕಚೇರಿಯಲ್ಲಿ ಅರ್ಜಿ ಸಲ್ಲಿಸಬಹುದಾಗಿದೆ. ವಧು - ವರರ ಭಾವಚಿತ್ರ, ಇತರ ಎಲ್ಲಾ ಮಾಹಿತಿಗಳೊಂದಿಗೆ ಅರ್ಜಿ ಸಲ್ಲಿಸಬಹುದಾಗಿದ್ದು; ಹೆಚ್ಚಿನ ಮಾಹಿತಿಗೆ ಸಂಪರ್ಕಿಸಿ. ಮೊ. 9663725152