ನಾಪೆÇೀಕ್ಲು ಮಾ. 11: ಮಕ್ಕಳ ಪರೀಕ್ಷಾ ಸಮಯದಲ್ಲಿ ವಿದ್ಯುತ್ ಇಲಾಖೆ ಪವರ್‍ಕಟ್ ಮಾಡುತ್ತಿದ್ದು, ಇದರಿಂದ ಗ್ರಾಮೀಣ ವಿದ್ಯಾರ್ಥಿಗಳಿಗೆ ಓದಲು ಸಮಸ್ಯೆಯಾಗಿದೆ. ಆದುದರಿಂದ ಪರೀಕ್ಷೆ ಮುಗಿಯುವವರೆಗೆ ಪವರ್‍ಕಟ್ ನಿಲ್ಲಿಸದಿದ್ದರೆ ಪ್ರತಿಭಟನೆ ನಡೆಸಲಾಗುವದು ಎಂದು ಮಡಿಕೇರಿ ತಾಲೂಕು ಜಯಕರ್ನಾಟಕ ಸಂಘಟನೆಯ ಅಧ್ಯಕ್ಷ ಬಿದ್ದಾಟಂಡ ಜಿನ್ನು ನಾಣಯ್ಯ, ನಾಪೆÇೀಕ್ಲು ವಾಹನ ಚಾಲಕರ ಮತ್ತು ಮಾಲೀಕರ ಸಂಘದ ಅಧ್ಯಕ್ಷ ಅಬ್ದುಲ್ ರಜಾಕ್, ಉಪಾಧ್ಯಕ್ಷ ನಾಗರಾಜ್, ಕಾರ್ಯದರ್ಶಿ ಜಕ್ರಿಯಾ, ಆರ್.ಟಿ.ಐ ಕಾರ್ಯಕರ್ತ ಹ್ಯಾರೀಸ್ ಎಚ್ಚರಿಸಿದ್ದಾರೆ.

ಈ ಬಗ್ಗೆ ‘ಶಕ್ತಿ’ಗೆ ಹೇಳಿಕೆ ನೀಡಿದ ಅವರು ಹಗಲು ಸಮಯದಲ್ಲಿ ಬೇಕಾದರೆ ಪವರ್‍ಕಟ್ ಮಾಡಲಿ. ಆದರೆ ಸಂಜೆ ಮಕ್ಕಳು ಓದಲು ಕೂರುತ್ತಿದ್ದಂತೆ ಪವರ್‍ಕಟ್ ಮಾಡುವದರ ಮೂಲಕ ತೊಂದರೆ ಆಗುತ್ತದೆ. ಇದನ್ನು ಇಲಾಖೆಯ ಹಿರಿಯ ಅಧಿಕಾರಿಗಳು ಗಂಭೀರವಾಗಿ ಪರಿಗಣಿಸಿ ಸೂಕ್ತ ವ್ಯವಸ್ಥೆ ಕಲ್ಪಿಸಬೇಕೆಂದು ಆಗ್ರಹಿಸಿದ್ದಾರೆ.