ಕೂಡಿಗೆ, ಮಾ. 11: ಕೂಡಿಗೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಬ್ಯಾಡಗೊಟ್ಟ ಗ್ರಾಮದಲ್ಲಿರುವ ಆಧಿವಾಸಿ ಕುಟುಂಬದವರಿಗೆ ಆರೋಗ್ಯ ಇಲಾಖೆಯ ವತಿಯಿಂದ. ಕೊರೊನಾ ವೈರಸ್ ಬಗ್ಗೆ ಅರಿವು ಕಾರ್ಯಕ್ರಮ ಗ್ರಾಮದ ಸಭಾಂಗಣದಲ್ಲಿ ನಡೆಯಿತು. ಬ್ಯಾಡಗೊಟ್ಟ ಗ್ರಾಮದಲ್ಲಿರುವ ಎಲ್ಲಾ ಕುಟುಂಬದವರಿಗೆ ಆರೋಗ್ಯ ಇಲಾಖೆಯ ವತಿಯಿಂದ ಕಾರ್ಯಕರ್ತೆ ವೇದಾವತಿ ಸಮರ್ಪಕವಾಗಿ ಮಾಹಿತಿ ನೀಡಿದರು. ಈ ಸಂದರ್ಭ ಹಾಡಿಯ ಪ್ರಮುಖರಾದ ಮಲ್ಲಪ್ಪ ಅಪ್ಪು ಗಿರೀಶ್ ರಾಜಣ್ಣ. ಬೋಜಮ್ಮ, ಮೋಹನ್ ಸೇರಿದಂತೆ ಅನೇಕ ಗ್ರಾಮಸ್ಥರು ಅರಿವು ಕಾರ್ಯಕ್ರಮದಲ್ಲಿ ಭಾಗವಹಿಸಿದರು. ಈ ಸಂದರ್ಭ ಅಂಗನವಾಡಿ ಕಾರ್ಯಕರ್ತರು, ಆಶಾ ಕಾರ್ಯಕರ್ತರು ಹಾಜರಿದ್ದರು.