ಮಡಿಕೇರಿ, ಮಾ. 11: ಗುಡ್ಡೆಹೊಸೂರಿನ ಬೊಳ್ಳೂರು ಸಮೀಪ ಇಂದು 7.30 ರ ಸಮಯದಲ್ಲಿ ಅಟ್ಟಿಸಿಕೊಂಡು ಬಂದ ನಾಯಿಯಿಂದ ತಪ್ಪಿಸಿಕೊಳ್ಳಲು ಯತ್ನಿಸಿದಾಗ ನಿಯಂತ್ರಣ ಕಳೆದುಕೊಂಡು ಬೈಕ್ ಬಿದ್ದ ಪರಿಣಾಮ ಹಿಂಬದಿ ಸವಾರ ಸುಂಟಿಕೊಪ್ಪದ ಸುನಿಲ್ ಗಂಭೀರ ಗಾಯಕ್ಕೊಳಗಾಗಿದ್ದಾರೆ. ಬೈಕ್ ಚಲಾಯಿಸುತ್ತಿದ್ದ ಶ್ಯಾಮ್ ಎಂಬವರಿಗೆ ಸಣ್ಣ ಪುಟ್ಟ ಗಾಯವಾಗಿದೆ. ಕುಶಾಲನಗರ ಆಸ್ಪತ್ರೆಯಲ್ಲಿ ಗಾಯಾಳುಗಳಿಗೆ ಆರಂಭಿಕ ಚಿಕಿತ್ಸೆ ಕೊಡಿಸಿ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ.