ಕೂಡಿಗೆ, ಮಾ. 11: ತೊರೆನೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಸಿದ್ಧಲಿಂಗಪುರ ಅಳುವಾರ, ಮುಖ್ಯ ರಸ್ತೆ ಕಾಮಗಾರಿಗೆ ಭೂಮಿ ಪೂಜೆಯನ್ನು ಶಾಸಕ ಎಂ.ಪಿ. ಅಪ್ಪಚ್ಚು ರಂಜನ್ ನೆರವೇರಿಸಿದರು. ಅಳುವಾರದ ಮುಖ್ಯ ರಸ್ತೆಯು ತೀರಾ ಹಾಳಾಗಿದ ಹಿನ್ನೆಲೆಯಲ್ಲಿ ಲೋಕೋಪಯೋಗಿ ಇಲಾಖೆಯ ವತಿಯಿಂದ ಒಂದುವರೆ ಕೋಟಿ ರೂಪಾಯಿ ವೆಚ್ಚದಲ್ಲಿ ಕಾಮಗಾರಿಗೆ ಶಾಸಕರು ಚಾಲನೆ ನೀಡಿದರು.

ನಂತರ ಮಾತನಾಡಿ, ಕುಶಾಲನಗರದ ಹೋಬಳಿ ವ್ಯಾಪ್ತಿಯಲ್ಲಿ ಮಳೆಹಾನಿ ಸೇರಿದಂತೆ ವಿವಿಧ ಯೋಜನೆಯ ಮೂಲಕ, ಕಾಮಗಾರಿಗಳನ್ನು ಕೈಗೊಳ್ಳುವ ಕಾರ್ಯ ನಡೆಯುತ್ತಿದೆ. ಗ್ರಾಮೀಣ ಪ್ರದೇಶದ ಉಪ ರಸ್ತೆಯ ಕಾಮಗಾರಿ ಹಾಗೂ ರೈತರ ಜಮೀನಿನ ದಾರಿಗಳಿಗೂ ಹೆಚ್ಚಿನ ಆದ್ಯತೆ ನೀಡಲಾಗುವುದು ಎಂದರು. ಅಧ್ಯಕ್ಷತೆಯನ್ನು ತೊರೆನೂರು ಗ್ರಾಮ ಪಂಚಾಯಿತಿ ಅಧ್ಯಕ್ಷ ದೇವರಾಜು ವಹಿಸಿದ್ದರು. ಜಿಲ್ಲಾ ಪಂಚಾಯಿತಿ ಉಪಾಧ್ಯಕ್ಷೆ ಲೋಕೇಶ್ವರಿ ಗೋಪಾಲ್ ಮಾತನಾಡಿದರು. ಈ ಸಂದರ್ಭ ಗ್ರಾಮ ಪಂಚಾಯಿತಿ ಸದಸ್ಯರು ಹಾಗೂ ಸ್ಥಳೀಯ ಗ್ರಾಮಸ್ಥರು, ಇಲಾಖೆಯ ಅಧಿಕಾರಿಗಳು ಹಾಜರಿದ್ದರು.