ಗೋಣಿಕೊಪ್ಪ, ಮಾ. 11: ಇಲ್ಲಿನ ಕಾವೇರಿ ಕಾಲೇಜು ಅರ್ಥಶಾಸ್ತ್ರ ಸ್ನಾತಕೋತ್ತರ ವಿಭಾಗದ ಮೂಲಕ; ಗೋಣಿಕೊಪ್ಪ ಗ್ರಾಮ ಪಂಚಾಯಿತಿ ವ್ಯಾಪ್ತಿಯ 2ನೇ ವಿಭಾಗದಲ್ಲಿ ಮೂಲಭೂತ ವ್ಯವಸ್ಥೆ ಕಲ್ಪಿಸಿಕೊಡುವಂತೆ ಸ್ಥಳೀಯ ಗ್ರಾಮ ಪಂಚಾಯಿತಿಗೆ ಮನವಿ ಮಾಡಿಕೊಡಲಾಯಿತು.
ಮನೆಮನೆಗೆ ತೆರಳಿ ಆರ್ಥಿಕ, ಸಾಮಾಜಿಕ ಸಮೀಕ್ಷೆ ನಡೆಸಿದ್ದ ವಿದ್ಯಾರ್ಥಿಗಳು ವರದಿ ತಯಾರಿಸಿ ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಶ್ರೀನಿವಾಸ್ ಅವರಿಗೆ ಹಸ್ತಾಂತರ ಮಾಡಿದರು.
ಈ ಸಂದರ್ಭ ಅರ್ಥಶಾಸ್ತ್ರ ವಿಭಾಗದ ಮುಖ್ಯಸ್ಥ ಬೆನಡಿಕ್ಟ್ ಸಾಲ್ಡಾನ, ಉಪನ್ಯಾಸಕರಾದ ಸಿ.ಎಂ. ಕಿರಣ್, ಜಿ. ಪವಿತ್ರ ಇದ್ದರು.