ಕೊರೊನಾ ವೈರಸ್ ಸಂಬಂಧಿಸಿದಂತೆ ಜಿಲ್ಲಾಡಳಿತ ಹಾಗೂ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಅಗತ್ಯ ಮುನ್ನೆಚ್ಚರಿಕಾ ಕ್ರಮ ಕೈಗೊಂಡಿದ್ದು, ಯಾರೂ ಸಹ ಆತಂಕ ಪಡುವ ಅಗತ್ಯವಿಲ್ಲ ಎಂದು ಜಿಲ್ಲಾಧಿಕಾರಿ ಅನೀಸ್ ಕಣ್ಮಣಿ ಜಾಯ್ ತಿಳಿಸಿದ್ದಾರೆ. ಈ ಸಂಬಂಧ ಇಂದು ಸಭೆ ನಡೆಸಲಾಯಿತು.ಕೊರೊನಾ ಜಿಲ್ಲೆಯಲ್ಲಿ ಹರಡದಂತೆ ತಡೆಯಲು ಆರೋಗ್ಯ ತಂಡಗಳ ಕ್ಷಿಪ್ರ ಕಾರ್ಯಪಡೆಗಳನ್ನು ರಚಿಸಲಾಗಿದ್ದು, ಗಡಿ ಗ್ರಾಮವಾದ ಕರಿಕೆ, ಕುಟ್ಟ, ಮಾಕುಟ್ಟ ಸೇರಿದಂತೆ ಪ್ರವಾಸಿ ಸ್ಥಳಗಳು ಹಾಗೂ ಜಿಲ್ಲೆಯಾದ್ಯಂತ ಹೆಚ್ಚಿನ ನಿಗಾ ವಹಿಸಿರುವುದಾಗಿ ಜಿಲ್ಲಾಧಿಕಾರಿ ತಿಳಿಸಿದರು.‘ಇರಾನ್ ಮತ್ತು ಇರಾಕ್ ರಾಷ್ಟ್ರಗಳಿಂದ ಜಿಲ್ಲೆಯ ಸ್ವಗ್ರಾಮಕ್ಕೆ ಬಂದ ಇಬ್ಬರನ್ನು ಪರೀಕ್ಷಿಸಿದ್ದು, ಅವರಲ್ಲಿ ಯಾವುದೇ ರೀತಿಯ ಕೊರೊನಾ ವೈರಸ್ ಲಕ್ಷಣಗಳು ಕಂಡುಬಂದಿಲ್ಲ. ದುಬೈನಿಂದ ಬಂದಿರುವ ಒಬ್ಬರನ್ನು ಪರಿಶೀಲಿಸಲಾಗಿದ್ದು, ಇವರ ರಕ್ತದ ಮಾದರಿಯನ್ನು ಕೊರೊನಾ: ಮುನ್ನೆಚ್ಚರಿಕೆ ವಹಿಸಿ(ಮೊದಲ ಪುಟದಿಂದ) ಪ್ರಯೋಗಾಲಯಕ್ಕೆ ಕಳುಹಿಸಿಕೊಡಲಾಗಿದೆ ಎಂದು ಜಿಲ್ಲಾಧಿಕಾರಿ ತಿಳಿಸಿದರು. ಕೊಡಗು ಜಿಲ್ಲೆಯು ಕೇರಳ ರಾಜ್ಯದೊಂದಿಗೆ ಗಡಿ ಹೊಂದಿಕೊಂಡಿರುವುದರಿಂದ ಜಿಲ್ಲೆಯಲ್ಲಿ ಹೆಚ್ಚಿನ ಮುಂಜಾಗ್ರತಾ ಕ್ರಮ ಕೈಗೊಳ್ಳಲಾಗಿದೆ.

ಜಿಲ್ಲೆಗೆ ಹೊರ ಭಾಗದಿಂದ ಹೆಚ್ಚಿನ ಪ್ರವಾಸಿಗರು ಆಗಮಿಸುವುದರಿಂದ ಪ್ರವಾಸಿ ತಾಣಗಳಲ್ಲಿ ಥರ್ಮಲ್ ಸ್ಕ್ಯಾನಿಂಗ್ ಉಪಕರಣವನ್ನು ಬಳಸಿ ಪ್ರವಾಸಿಗರನ್ನು ತಪಾಸಣೆ ಮಾಡಲು ಅಗತ್ಯ ಕ್ರಮ ಕೈಗೊಂಡಿದ್ದು, ವಿದೇಶಗಳಿಂದ ಜಿಲ್ಲೆಗೆ ಆಗಮಿಸುವವರ ಮೇಲೆ ಹೆಚ್ಚಿನ ನಿಗಾ ಮತ್ತು ನಿರಂತರ ಸಂಪರ್ಕದಲ್ಲಿದು,್ದ ಕೊರೊನಾ ವೈರಸ್ ರೋಗ ಲಕ್ಷಣ ಕಂಡುಬಂದಲ್ಲಿ ಹೆಚ್ಚಿನ ಚಿಕಿತ್ಸೆಯನ್ನು ನೀಡಲು ಕ್ರಮ ಕೈಗೊಂಡಿರುವುದಾಗಿ ಜಿಲ್ಲಾಧಿಕಾರಿ ವಿವರಿಸಿದರು.

ಕೊರೊನಾ ವೈರಸ್ ಲಕ್ಷಣ ಇಲ್ಲದವರು ಮುಖಗವಾಸು (ಮಾಸ್ಕ್), ಬಳಸುವ ಅವಶ್ಯವಿರುವುದಿಲ್ಲ. ಈಗಾಗಲೇ 1 ರಿಂದ 5 ನೇ ತರಗತಿ ವರೆಗೆ ತಾ. 17 ರಿಂದ ರಜೆ ಆರಂಭಗೊಳ್ಳಲಿದೆ. ಜೊತೆಗೆ 6-9ನೇ ತರಗತಿಯವರಿಗೆ ತಾ. 24 ರಿಂದ ಸರ್ಕಾರದ ಆದೇಶದಂತೆ ರಜೆ ನೀಡಲಾಗುವುದು ಎಂದು ತಿಳಿಸಿದರು.

ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಗೆ ವಿದೇಶದಿಂದ ಬರುವವರು ಸ್ವಯಂ ಪ್ರೇರಣೆಯಿಂದ ಮಾಹಿತಿ ನೀಡಬೇಕಿದೆ ಎಂದು ಕೋರಿದರು.

ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ಕೆ. ಮೋಹನ್ ಮಾತನಾಡಿ ಜಿಲ್ಲಾಸ್ಪತ್ರೆಯಲ್ಲಿ 10, ತಾಲೂಕು ಆಸ್ಪತ್ರೆಗಳಲ್ಲಿ 2 ಹಾಸಿಗೆಗಳ ವಿಶೇಷ ಕೊಠಡಿಗಳನ್ನು ಕರೊನಾ ವೈರಸ್ ಸಂಬಂಧಿಸಿದ ಲಕ್ಷಣಗಳು ಕಂಡುಬಂದವರಿಗೆ ಚಿಕಿತ್ಸೆ ನೀಡಲು ಮೀಸಲಿರಿಸಿರುವುದಾಗಿ ತಿಳಿಸಿದರು.

ಸಭೆಯಲ್ಲಿ ಆರ್.ಸಿ.ಎಚ್. ಅಧಿಕಾರಿ ಡಾ. ಗೋಪಿನಾಥ್ ಇತರರು ಇದ್ದರು.