ಮಡಿಕೇರಿ, ಮಾ. 12: ಕೊಡಗು ಪ್ರೆಸ್ ಕ್ಲಬ್ ವತಿಯಿಂದ ತಾ.29 ರಂದು ಆಯೋಜಿಸಿರುವ ಪ್ರೆಸ್ ಕ್ಲಬ್ ಡೇ ಕಾರ್ಯಕ್ರಮದಲ್ಲಿ ವಿವಿಧ ಕ್ಷೇತ್ರದಲ್ಲಿ ಗಣನೀಯ ಸಾಧನೆಗೈದಿರುವ ಹಾಗೂ ಪ್ರಶಸ್ತಿಗೆ ಭಾಜನರಾಗಿರುವ ಕ್ಲಬ್ ಸದಸ್ಯರನ್ನು ಸನ್ಮಾನಿಸಲಾಗುತ್ತದೆ ಎಂದು ಕ್ಲಬ್ ಪ್ರಧಾನ ಕಾರ್ಯದರ್ಶಿ ಆರ್.ಸುಬ್ರಮಣಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದಿಂದ ಪ್ರಶಸ್ತಿ ಸ್ವೀಕರಿಸಿರುವ ಪುತ್ತರೀರ ಕರುಣ್ ಕಾಳಯ್ಯ, ಕೊಡಗು ಜಿಲ್ಲಾ ಪತ್ರಕರ್ತರ ಸಂಘದಿಂದ ಪ್ರಶಸ್ತಿಗೆ ಭಾಜನರಾಗಿರುವ ಎಚ್.ಕೆ. ಜಗದೀಶ್, ನವೀನ್ ಸುವರ್ಣ, ಎಚ್.ಟಿ. ಅನಿಲ್, ಸುನೀಲ್ ಪೆÇನ್ನೆಟ್ಟಿ, ಸಣ್ಣುವಂಡ ಕಿಶೋರ್ ನಾಚಪ್ಪ, ಕುಡೆಕಲ್ ಸಂತೋಷ್, ಹಿರಿಕರ ರವಿ, ವಿಘ್ನೇಶ್ ಎಂ. ಭೂತನಕಾಡು, ಆರ್. ಸುಬ್ರಮಣಿ, ಎಂ.ಎನ್. ನಾಸಿರ್, ಕೆ.ಎ. ಆದಿತ್ಯ, ರಜಿತಾ ಕಾರ್ಯಪ್ಪ, ಸತೀಶ್ ನಾರಾಯಣ ಅವರನ್ನು ಸನ್ಮಾನಿಸಲಾಗುತ್ತದೆ.

ಪ್ರಕೃತಿ ವಿಕೋಪ ಸಂತ್ರಸ್ತರಿಗೆ ಆಶ್ರಯ ನೀಡಿದ ವಿ.ವಿ. ಅರುಣ್ ಕೂರ್ಗ್, ಕೊಡಗು ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ ಪ್ರಶಸ್ತಿಗೆ ಭಾಜನರಾದ ಎಚ್.ಆರ್. ಹರೀಶ್‍ಕುಮಾರ್, ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ ಪತ್ರಕರ್ತರಿಗೆ ಹೆಚ್ಚಿನ ಅವಕಾಶ ಕಲ್ಪಿಸಿಕೊಟ್ಟ ಕನ್ನಡ ಸಾಹಿತ್ಯ ಪರಿಷತ್ ಜಿಲ್ಲಾಧ್ಯಕ್ಷ ಬಿ.ಎಸ್. ಲೋಕೇಶ್ ಸಾಗರ್, ವೀರಶೈವ ಲಿಂಗಾಯಿತ ಸಂಘಟನಾ ವೇದಿಕೆ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿಯಾಗಿ ಆಯ್ಕೆಯಾಗಿರುವ ಎಸ್. ಮಹೇಶ್, ಲೈಕ್ ಆ್ಯಪ್‍ನಲ್ಲಿ ದಾಖಲೆ ನಿರ್ಮಿಸಿರುವ ವಿಶ್ವ ಕುಂಬೂರು ಅವರನ್ನು ಸನ್ಮಾನಿಸಲಾಗುತ್ತದೆ.