ಕುಶಾಲನಗರ, ಮಾ 12: ಕುಶಾಲನಗರ ಪಟ್ಟಣದ ಬಡಾವಣೆಗಳು ಪ್ರವಾಹದಿಂದ ಜಲಾವೃತಗೊಳ್ಳುವುದನ್ನು ತಪ್ಪಿಸಲು ಕಾವೇರಿ ನದಿಯ ಹೂಳು ತೆರವು ಮತ್ತು ನಿರ್ವಹಣೆ ಕಾಮಗಾರಿಯನ್ನು ಪ್ರಾರಂಭಿಸಲು ಜಿಲ್ಲಾಧಿಕಾರಿ ಅನೀಸ್ ಕಣ್ಮಣಿ ಜಾಯ್ ಅವರು ಸಮ್ಮತಿಯಿತ್ತಿದ್ದಾರೆ. ಇದಕ್ಕಾಗಿ ಪ್ರಾಕೃತಿಕ ವಿಕೋಪ ನಿಧಿಯಡಿ ರೂ. 87 ಲಕ್ಷವನ್ನು ಮಂಜೂರು ಮಾಡಿದ್ದು ಕಾವೇರಿ ನೀರಾವರಿ ನಿಗಮದ ಮೂಲಕ ಟೆಂಡರ್ ಕರೆದು ಕಾಮಗಾರಿ ಕೈಗೊಳ್ಳಲಿರುವದಾಗಿ “ಶಕ್ತಿ”ಗೆ ತಿಳಿಸಿದ್ದಾರೆ. ಎರಡು ಕಡೆಗಳಲ್ಲಿ ಹೂಳು ತೆಗೆದು, ಕಳೆಗಳನ್ನು ಕಿತ್ತು ನೀರು ಹರಿವೆಯನ್ನು ಸುಗಮಗೊಳಿ¸ ಲಾಗುವದು ಎಂದರು. ನಿನ್ನೆ ದಿನ ಜಿಲ್ಲಾಧಿಕಾರಿ ಅನೀಸ್ ಕಣ್ಮಣಿ ಜಾಯ್ ಅವರು ಕುಶಾಲನಗರಕ್ಕೆ ಭೇಟಿ ನೀಡಿ ನದಿ ಭಾಗದ ಪರಿಶೀಲನೆ ನಡೆಸಿ ಕಾವೇರಿ ನದಿ ಪ್ರವಾಹ ಸಂತ್ರಸ್ತರ ರಕ್ಷಣಾ ವೇದಿಕೆ ಪ್ರಮುಖರು ಮನವಿ ಸಲ್ಲಿಸಿದ ಹಿನ್ನೆಲೆಯಲ್ಲಿ ಪ್ರಥಮ ಹಂತದ ನದಿ ನಿರ್ವಹಣೆ ಕಾರ್ಯ ಕೈಗೆತ್ತಿ ಕೊಳ್ಳಲಾಗುವುದು ಎಂದು ಭರವಸೆಯತ್ತಿದ್ದರು. ಈ ಸಂಬಂಧ ಕಾವೇರಿ ನೀರಾವರಿ ನಿಗಮದ ಅಧಿಕಾರಿಗಳು ಅಂದಾಜು ಪಟ್ಟಿಯನ್ನು ಸಲ್ಲಿಸಿದ್ದು ಗುರುವಾರ ಬೆಳಿಗ್ಗೆ ಅಧಿಕಾರಿಗಳೊಂದಿಗೆ ವಿಶೇಷ ಸಭೆ ನಡೆಸಿ ಕಾಮಗಾರಿಗೆ ಆಡಳಿತಾತ್ಮಕ ಅನುಮೋದನೆ ನೀಡಲಾಗುವುದು ಎಂದು ಸ್ಥಳೀಯರಿಗೆ ಆಶ್ವಾಸನೆ ನೀಡಿದ್ದರು. ಅದರಂತೆ ಇಂದು ನಿಗಮದ ಅಧಿಕಾರಿಗಳೊಂದಿಗೆ ಚರ್ಚಿಸಿ ಅನುಮೋದನೆ ನೀಡಲಾಗಿದೆ.

ನಿನ್ನೆ ದಿನ ಜಿಲ್ಲಾಧಿಕಾರಿಯವರುÀ ಕುಶಾಲನಗರ ಸಾಯಿ ಬಡಾವಣೆಯಲ್ಲಿ ನಿರ್ಮಿಸಲು ಉದ್ದೇಶಿಸಲಾಗಿರುವ ಪೆಟ್ರೋಲ್ ಬಂಕ್ ಸ್ಥಳವನ್ನು ಕೂಡ ಪರಿಶೀಲನೆ ನಡೆಸಿದರು. ನಂತರ ಮಾತನಾಡಿದ ಅವರು, ಕೆಲವು ವ್ಯಕ್ತಿಗಳ ಆಕ್ಷೇಪ ಇದ್ದ ಹಿನ್ನೆಲೆಯಲ್ಲಿ ಸ್ಥಳ ಪರಿಶೀಲನೆ ನಡೆಸಲಾಗಿದೆ. ಅಧಿಕಾರಿಗಳ ತಾಂತ್ರಿಕ ವರದಿ ಪರಿಶೀಲಿಸಿ ಮುಂದಿನ ಕ್ರಮಕೈಗೊಳ್ಳ ಲಾಗುವುದು ಎಂದು ತಿಳಿಸಿದರು.

ಬಡಾವಣೆ ಮಾಲೀಕರೊಂದಿಗೆ ಮಾಹಿತಿ (ಮೊದಲ ಪುಟದಿಂದ) ಕಲೆ ಹಾಕಿದ ಜಿಲ್ಲಾಧಿಕಾರಿಗಳು ಅಧಿಕಾರಿಗಳ ಜೊತೆ ಚರ್ಚಿಸಿದರು. ಕುಶಾಲನಗರ ಪಟ್ಟಣ ಪಂಚಾಯಿತಿ ಮಾಜಿ ಸದಸ್ಯರಾದ ನಂಜುಂಡಸ್ವಾಮಿ ಅವರು ಸಾಯಿ ಬಡಾವಣೆ ಜಲಾವೃತಗೊಳ್ಳುತ್ತಿರುವ ಬಗ್ಗೆ ಜಿಲ್ಲಾಧಿಕಾರಿಗಳ ಗಮನ ಸೆಳೆದರು. ಅಲ್ಲದೆ, ಚೇಂಬರ್ ಆಫ್ ಕಾಮರ್ಸ್ ಸ್ಥಾನೀಯ ಸಮಿತಿ ಅಧ್ಯಕ್ಷÀ ಅಮೃತ್‍ರಾಜ್, ಪ್ರಮುಖರಾದ ರವೀಂದ್ರ ರೈ ಅವರುಗಳು ಪೆಟ್ರೋಲ್ ಬಂಕ್ ಸ್ಥಾಪನೆಗೆ ಯಾವದೇ ಅಡ್ಡಿ ಇರುವುದಿಲ್ಲ ಎಂದು ಜಿಲ್ಲಾಧಿಕಾರಿಯವರಿಗೆÉ ತಿಳಿಸಿದರು.

ಈ ಸಂದರ್ಭ ಉಪ ತಹಶೀಲ್ದಾರ್ ಚಿಣ್ಣಪ್ಪ, ಕುಶಾಲನಗರ ಪ.ಪಂ. ಮುಖ್ಯಾಧಿಕಾರಿ ಸುಜಯ್‍ಕುಮಾರ್, ಕಾವೇರಿ ನೀರಾವರಿ ನಿಗಮ ಅಧಿಕಾರಿ ಮಹೇಂದ್ರಕುಮಾರ್ ಕಂದಾಯಾಧಿಕಾರಿ ಮಧುಸೂದನ್, ಗ್ರಾಮಲೆಕ್ಕಿಗ ಗೌತಮ್, ಅಭಿಯಂತರೆ ಶ್ರೀದೇವಿ, ಕಾವೇರಿ ನದಿ ಪ್ರವಾಹ ಸಂತ್ರಸ್ತರ ವೇದಿಕೆ ಅಧ್ಯಕ್ಷÀ ಎಂ.ಎನ್. ಚಂದ್ರಮೋಹನ್, ಉಪಾಧ್ಯಕ್ಷ ತೋರೇರ ಉದಯಕುಮಾರ್, ಖಜಾಂಚಿ ಕೊಡಗಿನ ಹರ್ಷ, ಪ್ರಧಾನ ಕಾರ್ಯದರ್ಶಿ ವರದ ಮತ್ತಿತರರು ಇದ್ದರು.