ಕೂಡಿಗೆ, ಮಾ. 12: ಕೂಡಿಗೆ ಗ್ರಾಮ ಪಂಚಾಯ್ತಿಯ 2018-19ನೇ ಸಾಲಿನ ಮಹಾತ್ಮಾಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯ ಸಾಮಾಜಿಕ ಲೆಕ್ಕ ಪರಿಶೋಧನಾ ಗ್ರಾಮಸಭೆಯು ತಾಲೂಕು ಶಿಕ್ಷಣ ಅಧಿಕಾರಿ ಪಾಂಡು ಅವರ ಅಧ್ಯಕ್ಷತೆಯಲ್ಲಿ ನಡೆಯಿತು.
ಗ್ರಾ.ಪಂ ಅಭಿವೃದ್ಧಿ ಅಧಿಕಾರಿ ಶಿಲ್ಪ ಮಹಾತ್ಮಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯಡಿ ನಡೆದ ಕಾಮಗಾರಿಗಳ ಬಗ್ಗೆ ಹಾಗೂ ಗ್ರಾ.ಪಂ. ವತಿಯಿಂದ ಕೈಗೊಂಡ ಯೋಜನೆಯ ಬಗ್ಗೆ ಮಾಹಿತಿ ನೀಡಿದರು.
ತಾಲೂಕು ಲೆಕ್ಕ ಪರಿಶೋಧನಾ ಇಲಾಖೆಯ ಅಧಿಕಾರಿ ಪ್ರೀತಂ ಹಣಕಾಸಿನ ಖರ್ಚು ವೆಚ್ಚಗಳ ಬಗ್ಗೆ ಸಭೆಗೆ ಮಾಹಿತಿ ನೀಡಿದರು.
ಸಭೆಯಲ್ಲಿ ಗ್ರಾ.ಪಂ ಅಧ್ಯಕ್ಷೆ ಪೇಮಲೀಲಾ; ಜಿಲ್ಲಾ ಪಂಚಾಯತ್ ಸದಸ್ಯೆ ಮಂಜಳಾ; ಗ್ರಾಮ ಪಂಚಾಯತಿ ಸದಸ್ಯರು ಸೇರಿದಂತೆ ಗ್ರಾ.ಪಂ ವ್ಯಾಪ್ತಿಯ ಸಾರ್ವಜನಿಕರು ಇದ್ದರು.