ಶನಿವಾರಸಂತೆ, ಮಾ. 12: ಸಾಧಕ ಮಹಿಳೆಯರನ್ನೇ ಆದರ್ಶವಾಗಿರಿಸಿ ಕೊಂಡು ಹೆಣ್ಣುಮಕ್ಕಳು ಜೀವನದಲ್ಲಿ ಅಭಿವೃದ್ಧಿ ಹೊಂದಬೇಕು ಎಂದು ಗ್ರಾಂಥ ಪಾಲಕಿ ಎಸ್.ಪಿ. ದಿವ್ಯಾ ಅಭಿಪ್ರಾಯಪಟ್ಟರು.

ಪಟ್ಟಣದ ನಂದೀಶ್ವರ ಕಲ್ಯಾಣ ಮಂಟಪದಲ್ಲಿ ಧರ್ಮಸ್ಥಳ ಸಂಘದ ‘ಬಿ’ ಒಕ್ಕೂಟದ ವತಿಯಿಂದ ನಡೆದ ಮಹಿಳಾ ದಿನಾಚರಣೆ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.

ಒಕ್ಕೂಟದ ಕಾರ್ಯದರ್ಶಿ ಬಾಲಕೃಷ್ಣ, ಸಂಸ್ಥೆಯ ಸೇವಾ ಪ್ರತಿನಿಧಿ ಎಸ್.ಆರ್. ಶೋಭಾ, ಅಧ್ಯಕ್ಷತೆ ವಹಿಸಿದ್ದ ಲಕ್ಷ್ಮೀ ಮಾತನಾಡಿದರು. ಸಂಘದ ಪ್ರತಿನಿಧಿಗಳು, ಸದಸ್ಯೆಯರು ಉಪಸ್ಥಿತರಿದ್ದರು.