ಮಡಿಕೇರಿ, ಮಾ. 12: ಕೊಡಗು ಜಿಲ್ಲಾ ಅಖಿಲ ಭಾರತೀಯ ಸಾಹಿತ್ಯ ಪರಿಷತ್ ವತಿಯಿಂದ ರಸಪ್ರಶ್ನಾ ಕಾರ್ಯಕ್ರಮವನ್ನು ಮಧು ಕೃಪಾದಲ್ಲಿ ಕಿಗ್ಗಾಲು ಎಸ್. ಗಿರೀಶ್ ಅಧ್ಯಕ್ಷತೆಯಲ್ಲಿ ನಡೆಸಲಾಯಿತು.
ರಸಪ್ರಶ್ನೆಗಳು ನಮ್ಮ ಜ್ಞಾನವನ್ನು ಹೆಚ್ಚಿಸಿ, ಸ್ಪರ್ಧಾತ್ಮಕ ಜಗತ್ತಿನಲ್ಲಿ ನಮ್ಮನ್ನು ಮುಂಚೂಣಿಯಲ್ಲಿರಿಸುತ್ತವೆ ಎಂದು ಅವರು ಅಭಿಪ್ರಾಯಪಟ್ಟರು. ಬಾರಿಯಂಡ ಜೋಯಪ್ಪ, ಕಸ್ತೂರಿ ಗೋವಿಂದಮ್ಮಯ್ಯ, ಕಡ್ಲೇರ ತುಳಸಿ ಮೋಹನ್, ಮೊದಲಾದವರು ಸ್ಪರ್ಧೆಯಲ್ಲಿ ಪಾಲ್ಗೊಂಡಿದ್ದರು.
ಮೊಣ್ಣಂಡ ಶೋಭಾ ಸುಬ್ಬಯ್ಯ ಪ್ರಾರ್ಥಿಸಿದರೆ, ಕಾರ್ಯದರ್ಶಿ ಬಬ್ಬೀರ ಸರಸ್ವತಿ ಸ್ವಾಗತಿಸಿದರು, ಖಜಾಂಚಿ ಆಶಾ ಧರ್ಮಪಾಲ್ ವಂದಿಸಿದರು.