ಮಡಿಕೇರಿ, ಮಾ. 12: ಕಾಡಾನೆ ಸೇರಿದಂತೆ ವನ್ಯ ಪ್ರಾಣಿಗಳ ಧಾಳಿಯಿಂದ ಮೃತಪಟ್ಟವರ ಕುಟುಂಬಕ್ಕೆ ರೂ 10 ಲಕ್ಷ ಪರಿಹಾರ ನೀಡುವ ಬಗ್ಗೆ, ಅರಣ್ಯ ಪರಿಸರ ಮತ್ತು ಜೀವಿಶಾಸ್ತ್ರ ಇಲಾಖೆ ಸಚಿವ ಆನಂದ್‍ಸಿಂಗ್ ಪ್ರಕಟಿಸಿದ್ದಾರೆ.ಶಾಸಕ ಅಪ್ಪಚ್ಚು ರಂಜನ್ ಅವರು ಸದನದಲ್ಲಿ ಮಂಡಿಸಿದ್ದ ಚುಕ್ಕೆ ಗುರುತಿನ ಪ್ರಶ್ನೆಯಲ್ಲಿ ವನ್ಯ ಪ್ರಾಣಿಗಳ ಧಾಳಿಯಿಂದ ಮೃತಪಟ್ಟ ಕುಟುಂಬಕ್ಕೆ ರೂ. 10 ಲಕ್ಷ ಹಾಗೂ ಗಾಯಗೊಂಡವರಿಗೆ ರೂ. 5 ಸಾವಿರ ಮಾಸಿಕ ಪರಿಹಾರ ನೀಡುವಂತೆ ಕೋರಿದ್ದರು. ಶಾಸಕರ ಮನವಿಗೆ ಉತ್ತರಿಸಿದ ಸಚಿವರು ಗಾಯಗೊಂಡವರಿಗೆ ಮಾಸಿಕ ರೂ. 2500 ರಿಂದ ರೂ.5000 ಸಾವಿರ ಹಾಗೂ ಮೃತಪಟ್ಟವರ ಕುಟುಂಬಕ್ಕೆ ರೂ. 7.50 ಲಕ್ಷದ ಬದಲಿಗೆ ರೂ. 10 ಲಕ್ಷ ಪರಿಹಾರ ನೀಡಲು ಒಪ್ಪಿಗೆ ನೀಡಿದ್ದಾರೆ.