ಗುಡ್ಡೆಹೊಸೂರು, ಮಾ. 12: ಇಲ್ಲಿನ ಹಿತರಕ್ಷಣಾ ಯೂತ್ ಕ್ಲಬ್ ವತಿಯಿಂದ ಇದೇ ತಾ. 28 ಮತ್ತು 29 ರಂದು ಎರಡು ದಿನಗಳ ಕಾಲ ಜಿಲ್ಲಾ ಮಟ್ಟದ ಮತ್ತು ರಾಜ್ಯಮಟ್ಟದ ಹೊನಲು ಬೆಳಕಿನ ವಾಲಿಬಾಲ್ ಪಂದ್ಯಾಟ ನಡೆಯಲಿದೆ. ಜಿಲ್ಲಾ ಮಟ್ಟದ ಮತ್ತು ರಾಜ್ಯ ಮಟ್ಟದ ಪಂದ್ಯಗಳು ಪ್ರತ್ಯೇಕವಾಗಿ ನಡೆಯಲಿದೆ. ಈ ಪಂದ್ಯಾಟದಲ್ಲಿ ಭಾಗವಹಿಸುವವರು ತಾ. 26ರ ಒಳಗಾಗಿ ಹೆಸರು ನೋಂದಾಯಿಸಿಕೊಳ್ಳಬಹುದಾಗಿದೆ.