ಶನಿವಾರಸಂತೆ, ಮಾ. 12: ಗೌಡಳ್ಳಿ ಗ್ರಾ.ಪಂ. ಕಚೇರಿ ಸಭಾಂಗಣದಲ್ಲಿ ಗೌಡಳ್ಳಿ ಗ್ರಾ.ಪಂ.ನ ಮಹಿಳಾ ಗ್ರಾಮ ಸಭೆ ಗ್ರಾ.ಪಂ. ಅಧ್ಯಕ್ಷೆ ನಾಗರತ್ನ ಅಧ್ಯಕ್ಷತೆಯಲ್ಲಿ ನಡೆಯಿತು. ಪಂಚಾಯಿತಿ ಅಧಿಕಾರಿ ಬಿ.ಜೆ. ಮೇದಪ್ಪ ಮಾತನಾಡಿ, ಗರ್ಭಿಣಿಯರಿಗೆ ಸರಕಾರದಿಂದ ಸಿಗುವ ಯೋಜನೆಗಳ ಬಗ್ಗೆ ಮಾಹಿತಿ ನೀಡಿದರು. ಗರ್ಭಿಣಿಯರಿಗೆ ತಾಯಿ ಕಾರ್ಡ್ ಅದರಿಂದ ಸಿಗುವ ಸವಲತ್ತುಗಳ ಬಗ್ಗೆ ತಿಳಿಸಿ, ತಾಯಿ ಕಾರ್ಡ್ ಪಡೆಯಲು ನಿಗದಿಪಡಿಸಿರುವ ಅವಧಿಯನ್ನು ಮತ್ತು ಗರ್ಭಿಣಿಯರಿಗೆ ಆರೋಗ್ಯ ಕೇಂದ್ರಗಳಲ್ಲಿ ಉಚಿತ ಚುಚ್ಚು ಮದ್ದುಗಳನ್ನು ನೀಡುವ ಬಗ್ಗೆ ಮಾಹಿತಿ ನೀಡಿದರು.
ಆಶಾ ಕಾರ್ಯಕರ್ತೆಯರು ಮಾತನಾಡಿ, ಕೊರೊನಾ ವೈರಸ್ನ ಗುಣಲಕ್ಷಣಗಳು, ಈ ಸೋಂಕು ಒಬ್ಬ ವ್ಯಕ್ತಿಯಿಂದ ಬೇರೊಬ್ಬ ವ್ಯಕ್ತಿಗೆ ಹರಡುವ ಸೋಂಕಾಗಿದ್ದು, ಇದನ್ನು ತಡೆಗಟ್ಟಲು ಕೈಗೊಳ್ಳಬೇಕಾದ ಅಗತ್ಯ ಕ್ರಮಗಳ ಬಗ್ಗೆ ಮಾಹಿತಿ ನೀಡಿದರು.