ಮಡಿಕೇರಿ, ಮಾ. 13: ದೆಹಲಿಯಲ್ಲಿ ಉಂಟಾದ ಗಲಭೆಗೆ ಸಂಬಂಧಿಸಿದಂತೆ ಪೊಲೀಸರು ಅಮಾಯಕರನ್ನು ಬಂಧಿಸುತ್ತಿದ್ದು; ಇದನ್ನು ಖಂಡಿಸಿ, ನೈಜ ಆರೋಪಿಗಳನ್ನು ಬಂಧಿಸುವಂತೆ ಒತ್ತಾಯಿಸಿ ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ ಸಂಘಟನೆ ವತಿಯಿಂದ ಜಿಲ್ಲಾಧಿಕಾರಿಗಳ ಕಚೇರಿ ಎದುರು ಪ್ರತಿಭಟನೆ ನಡೆಸಲಾಯಿತು.

ಕೇಂದ್ರ ಸರಕಾರ ಹಾಗೂ ದೆಹಲಿ ಪೊಲೀಸರ ವಿರುದ್ಧ ಘೋಷಣೆಗಳನ್ನು ಕೂಗುತ್ತಾ; ಅಮಾಯಕರ ಬಂಧನವನ್ನು ನಿಲ್ಲಿಸುವಂತೆ ಒತ್ತಾಯಿಸಿ ಜಿಲ್ಲಾಡಳಿತದ ಮೂಲಕ ಕೇಂದ್ರ ಸರಕಾರಕ್ಕೆ ಮನವಿ ಸಲ್ಲಿಸಲಾಯಿತು. ಪಿಎಫ್‍ಐ ಜಿಲ್ಲಾಧ್ಯಕ್ಷ ಅಮೀನ್ ಮೊಹಿಸಿನ್, ಎಸ್‍ಡಿಪಿಐ ಪ್ರಧಾನ ಕಾರ್ಯದರ್ಶಿ ಅಬ್ದುಲ್ ಅಡ್ಕಾರ್, ನಗರಾಧ್ಯಕ್ಷ ಎಂ.ಎ. ಮನ್ಸೂರ್, ಡಿಎಸ್‍ಎಸ್ ರಾಜಾಧ್ಯಕ್ಷ ವೀರಭದ್ರಯ್ಯ, ಜಿಲ್ಲಾಧ್ಯಕ್ಷ ಹೆಚ್.ಎಲ್. ದಿವಾಕರ್ ಇನ್ನಿತರರು ಪಾಲ್ಗೊಂಡಿದ್ದರು.