ಮಡಿಕೇರಿ, ಮಾ. 14: ಕರ್ನಾಟಕ ಲೋಕ ಸೇವಾ ಆಯೋಗದ ವತಿಯಿಂದ ರಾಜ್ಯದ ವಿವಿಧ ಇಲಾಖೆಗಳಲ್ಲಿ ಖಾಲಿಯಿರುವ 1080 ಕಿರಿಯ ಸಹಾಯಕ/ದ್ವಿತೀಯ ದರ್ಜೆ ಸಹಾಯಕರ ನೇಮಕಾತಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ದ್ವಿತೀಯ ಪಿ.ಯು.ಸಿ. ತೇರ್ಗಡೆ ಅಥವಾ ತತ್ಸಮಾನ ವಿದ್ಯಾರ್ಹತೆ ಹೊಂದಿರಬೇಕು. ಅರ್ಜಿ ಸಲ್ಲಿಸಲು ಕನಿಷ್ಟ 18 ರಿಂದ ಗರಿಷ್ಠ 35 ವರ್ಷಗಳು ಹಾಗೂ ಹಿಂದುಳಿದ ವರ್ಗದ ಅಭ್ಯರ್ಥಿಗಳಿಗೆ ಹಾಗೂ ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡ ಅಭ್ಯರ್ಥಿಗಳಿಗೆ ವಯೋಮಿತಿಯಲ್ಲಿ ಸಡಿಲಿಕೆ ಇದೆ.

ಅರ್ಜಿ ಸಲ್ಲಿಸಲು ಏಪ್ರಿಲ್ 9 ಕೊನೆಯ ದಿನವಾಗಿದೆ. ಶುಲ್ಕ ಪಾವತಿಸಲು ಏಪ್ರಿಲ್ 13 ಕೊನೆಯ ದಿನವಾಗಿದೆ. ನೆಟ್ ಬ್ಯಾಂಕಿಂಗ್/ಡೆಬಿಟ್ ಕಾರ್ಡ್/ಕ್ರೆಡಿಟ್ ಕಾರ್ಡ್ ಮೂಲಕ ಪಾವತಿ ಶುಲ್ಕ ಪಾವತಿಸಬಹುದು.