ಮಡಿಕೇರಿ, ಮಾ. 14: ಕನಿಷ್ಟ ಬೆಂಬಲ ಬೆಲೆ ಯೋಜನೆಯಡಿ ಭತ್ತ ಖರೀದಿ ಮಾಡುವ ಸಂಬಂಧ ಭತ್ತ ಖರೀದಿ ಕೇಂದ್ರದಲ್ಲಿ ರೈತರ ನೋಂದಾವಣಿ ಮಾಡಲು ತಾ. 31 ರವರೆಗೆ ಅವಧಿ ವಿಸ್ತರಣೆ ಮಾಡಲಾಗಿರುತ್ತದೆ.
ಭತ್ತ ಖರೀದಿ ಕೇಂದ್ರ ಮಡಿಕೇರಿ ತಾಲೂಕು ಎ.ಪಿ.ಎಂ.ಸಿ.ಯ ದೂ. 7899585528, ವೀರಾಜಪೇಟೆ ತಾಲೂಕಿನ ಗೋಣಿಕೊಪ್ಪ ಎ.ಪಿ.ಎಂ.ಸಿ.ಯ ದೂ. 8553575880, ಸೋಮವಾರಪೇಟೆ ತಾಲೂಕಿನ ಕುಶಾಲನಗರ ಎ.ಪಿ.ಎಂ.ಸಿ.ಯ ದೂ. 9448648520 ಅನ್ನು ಸಂಪರ್ಕಿಸುವಂತೆ ಕೋರಲಾಗಿದೆ.
ಜಿಲ್ಲೆಯ ಎಲ್ಲಾ ವರ್ಗದ ಎಪಿಎಲ್, ಬಿಪಿಎಲ್, ಎಎವೈ ಪಡಿತರ ಚೀಟಿ ಕುಟುಂಬದ ಸದಸ್ಯರುಗಳ ಬೆರಳಚ್ಚನ್ನು ಪಡೆದು ಇಕೈವೈಸಿ ಮಾಡುವ ಪ್ರಕ್ರಿಯೆ ಚಾಲ್ತಿಯಲ್ಲಿರುತ್ತದೆ. ಸದರಿ ಪ್ರಕ್ರಿಯೆಯನ್ನು ಪಡಿತರ ಚೀಟಿ ಕುಟುಂಬದ ಎಲ್ಲಾ ಸದಸ್ಯರು ಸಂಬಂಧಪಟ್ಟ ನ್ಯಾಯಬೆಲೆ ಅಂಗಡಿಗೆ ತೆರಳಿ ಬೆರಳಚ್ಚನ್ನು ನೀಡಿ ಇಕೆವೈಸಿ ಪ್ರಕ್ರಿಯೆಯನ್ನು ಪೂರ್ಣಗೊಳಿಸತಕ್ಕದ್ದು. ಇಕೆವೈಸಿ ಪ್ರಕ್ರಿಯೆಯು ಉಚಿತವಾಗಿದ್ದು, ಪಡಿತರ ಚೀಟಿದಾರರು ಯಾವುದೇ ಶುಲ್ಕವನ್ನು ಭರಿಸುವಂತಿಲ್ಲ ಎಂದು ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆಯ ಉಪ ನಿರ್ದೇಶಕ ಗೌರವ್ ಕುಮಾರ್ ಶೆಟ್ಟಿ ತಿಳಿಸಿದ್ದಾರೆ.