ಮಡಿಕೇರಿ, ಮಾ. 13: ಯುವಕರೇ ದೇಶದ ಶಕ್ತಿ. ಭಾರತದ ಭವ್ಯ ಭವಿಷ್ಯಕ್ಕೆ ಯುವ ವರ್ಗವೇ ಬುನಾದಿ ಎಂದು ಜಿ.ಪಂ.ಅಧ್ಯಕ್ಷ ಬಿ.ಎ. ಹರೀಶ್ ಹೇಳಿದರು.
ನೆಹರು ಯುವ ಕೇಂದ್ರ, ಯುವಜನ ವ್ಯವಹಾರ ಹಾಗೂ ಕ್ರೀಡಾ ಸಚಿವಾಲಯ, ನೆಲ್ಲಕ್ಕಿ ಯುವತಿ ಮಂಡಳಿ, ಕೊಡಗು ಜಿಲ್ಲಾ ಯುವ ಒಕ್ಕೂಟ ಹಾಗೂ ಮಡಿಕೇರಿ, ವೀರಾಜಪೇಟೆ ಮತ್ತು ಸೋಮವಾರ ಪೇಟೆ ತಾಲೂಕು ಯುವ ಒಕ್ಕೂಟ ಇವರುಗಳ ಸಂಯುಕ್ತ ಆಶ್ರಯದಲ್ಲಿ ನಗರದ ಕಾವೇರಿ ಕಲಾಕ್ಷೇತ್ರದಲ್ಲಿ ನಡೆದ ಜಿಲ್ಲಾ ಯುವ ಸಮಾವೇಶ, ಉತ್ತಮ ಯುವ ಸಂಘ ಪ್ರಶಸ್ತಿ ವಿತರಣೆ ಹಾಗೂ ಕ್ರೀಡಾ ಸಾಮಗ್ರಿ ವಿತರಣಾ ಸಮಾರಂಭ ಯುವ ಸಂಘಗಳ ಸದೃಢ ಕಾರ್ಯಕ್ರಮದ ಸಮಾರೋಪ ಸಮಾರಂಭವನ್ನು ಉದ್ಘಾಟಿಸಿ ಅವರು ಮಾತನಾಡಿದರು.
ಕ್ರೀಡೆಯಲ್ಲಿ ತೊಡಗಿಸಿಕೊಳ್ಳು ವುದರಿಂದ ಮನಸ್ಸು ಮತ್ತು ದೈಹಿಕ ಆರೋಗ್ಯ ಉತ್ತಮವಾಗಿರುತ್ತದೆ. ಸರ್ಕಾರದ ವತಿಯಿಂದ ಉಚಿತವಾಗಿ ಕ್ರೀಡಾ ಸಾಮಗ್ರಿ ವಿತರಿಸಲಾಗಿದೆ. ಇವುಗಳನ್ನು ಸದ್ಭಳಕ್ಕೆ ಮಾಡಿಕೊಳ್ಳುವಂತೆ ಸಲಹೆಯಿತ್ತರು.
ಸಮಾರಂಭದ ಅಧ್ಯಕ್ಷತೆ ವಹಿಸಿ ಮಾತನಾಡಿದ ಜಿ.ಪಂ. ಉಪಾಧ್ಯಕೆÀ್ಷ ಲೋಕೇಶ್ವರಿ ಗೋಪಾಲ್, ದೇಶದ ಆಸ್ತಿ ಮತ್ತು ಶಕ್ತಿ ಯುವ ವರ್ಗವೇ ಆಗಿದೆ.
ದೇಶಕ್ಕೆ ಅನೇಕ ಮಹನೀಯರು ತಮ್ಮದೇ ಆದ ಕೊಡುಗೆ ನೀಡಿದ್ದಾರೆ. ಅವರ ಆದರ್ಶ ಗಳನ್ನು ಜೀವನದಲ್ಲಿ ಅಳವಡಿಸಿಕೊಳ್ಳಿ ಎಂದು ಸಲಹೆ ನೀಡಿದರು.
ನೆಹರು ಯುವ ಕೇಂದ್ರದ ಯುವಜನ ಸಮನ್ವಯಾಧಿಕಾರಿ ಉಲ್ಲಾಸ್ ಅವರು, ಯುವ ಸಂಘವು ಸಮಾಜದ ಬದಲಾವಣೆಯಲ್ಲಿ ಪ್ರಮುಖ ಪಾತ್ರ ವಹಿಸುತ್ತದೆ.
ಸಾಮಾಜಿಕವಾಗಿ ಉಪಯುಕ್ತ ಕೊಡುಗೆಗಳನ್ನು ನೀಡುವಲ್ಲಿ ಯುವ ಸಂಘಗಳ ಪಾತ್ರ ಮಹತ್ವದ್ದಾಗಿದೆ ಎಂದರು.
ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಪ್ರಾಧ್ಯಾಪಕ ಡಾ. ದಯಾನಂದ್ ಮಾತನಾಡಿ, ಭಾರತ ಯುವ ರಾಷ್ಟ್ರವಾಗಿದೆ. ದೇಶದ ಜನಸಂಖ್ಯೆಯಲ್ಲಿ ಶೇ. 55 ಕ್ಕೂ ಹೆಚ್ಚು ಯುವಕರಿದ್ದಾರೆ ಎಂದರು.
ಕಾರ್ಯಕ್ರಮದಲ್ಲಿ ಜಿಲ್ಲಾ ಯುವ ಒಕ್ಕೂಟದ ಅಧ್ಯಕ್ಷ ಸುಕುಮಾರ್ ಜೊತೆಗೆ ಯುವ ಜನೋತ್ಸವಗಳಿಗೆ ಹೆಚ್ಚಿನ ಅನುದಾನವನ್ನು ಮುಂದಿನ ದಿನಗಳಲ್ಲಿ ನೀಡುವಂತೆ ಜಿ.ಪಂ. ಅಧ್ಯಕ್ಷರು ಹಾಗೂ ಉಪಾಧ್ಯಕ್ಷರಿಗೆ ಮನವಿ ಮಾಡಿದರು.
ಕಾರ್ಯಕ್ರಮದಲ್ಲಿ ಯುವ ಸಂಘಗಳಿಗೆ ಉಚಿತವಾಗಿ ಕ್ರೀಡಾ ಸಾಮಗ್ರಿ ವಿತರಿಸಲಾಯಿತು. ಸೋಮವಾರಪೇಟೆ ತಾಲೂಕಿನ ಹಾರಳ್ಳಿ ಬೀಟಿ ಕಟ್ಟೆಯ ಡಾ. ಬಿ.ಆರ್. ಅಂಬೇಡ್ಕರ್ ಯುವಕ ಸಂಘಕ್ಕೆ ಜಿಲ್ಲಾ ಮಟ್ಟದ ಉತ್ತಮ ಯುವಸಂಘ ಪ್ರಶಸ್ತಿಯನ್ನು ನೀಡಿ ಗೌರವಿಸಲಾಯಿತು. ಫೀಲ್ಡ್ ಮಾರ್ಷಲ್ ಕೆ.ಎಂ. ಕಾರ್ಯಪ್ಪ ಕಾಲೇಜಿನ ಎನ್ಎಸ್ ಎಸ್ ಘಟಕದ ಯೋಜನಾಧಿಕಾರಿ ಡಾ. ಗೀತಾಂಜಲಿ, ನೆಹರು ಯುವ ಕೇಂದ್ರದ ರಾಷ್ಟ್ರೀಯ ಯುವ ಕಾರ್ಯಕರ್ತ ರಾದ ಸಂತೋಷ್ ಕುಮಾರ್, ಚರಣ್ ಬಿ.ಜೆ., ಮಿಥುನ್ ಎಂ.ಬಿ, ಲಕ್ಷ್ಮೀಕಾಂತ್, ಮೇರಿ ಒಲಿವೆರ, ಧನಲಕ್ಷ್ಮಿ, ರಾಜೇ ಶ್ವರಿ, ಜ್ಯೋತಿ ಸೇರಿದಂತೆ ಇತರರು ಇದ್ದರು.
ಜಿಲ್ಲಾ ಯುವ ಒಕ್ಕೂಟದ ಅಧ್ಯಕ್ಷ ಸುಕುಮಾರ್ ಸ್ವಾಗತಿಸಿದರು, ನೆಲ್ಲಕ್ಕಿ ಯುವತಿ ಮಂಡಳಿಯ ಅಧ್ಯಕೆÀ್ಷ ಇಂದುಮತಿ ಪ್ರಾರ್ಥಿಸಿದರು. ಕಲಾವಿದೆ ಮಂಜು ಭಾರ್ಗವಿಯವರು ಸ್ವಾಗತ ನೃತ್ಯ ಪ್ರದರ್ಶಿಸಿದರು.
ನೆಹರು ಯುವ ಕೇಂದ್ರದ ರಾಷ್ಟ್ರೀಯ ಯುವ ಕಾರ್ಯಕರ್ತರಾದ ಚಂದನ್ ವಂದಿಸಿದರು. ಜಿಲ್ಲಾ ಯುವ ಒಕ್ಕೂಟದ ಮಾಜಿ ಅಧ್ಯಕ್ಷ ಹರೀಶ್ ನಿರೂಪಿಸಿದರು.