ಸೋಮವಾರಪೇಟೆ, ಮಾ. 14: ಇಲ್ಲಿನ ಶ್ರೀ ಅಯ್ಯಪ್ಪ ಹಾಗೂ ಮುತ್ತಪ್ಪ ದೇವಾಲಯದಲ್ಲಿ ತಾ. 15ರಿಂದ 17ರ ವರೆಗೆ ನಡೆಸಲು ಉದ್ದೇಶಿಸಲಾಗಿದ್ದ ಜಾತ್ರೋತ್ಸವವನ್ನು ಮುಂದೂಡ ಲಾಗಿದೆ ಎಂದು ದೇವಾಲಯ ಸಮಿತಿ ಅಧ್ಯಕ್ಷ ವಿನೋದ್ ತಿಳಿಸಿದರು.

ದೇಶದಲ್ಲಿ ಕೊರೊನಾ ಕಟ್ಟೆಚ್ಚರ ಹಿನ್ನೆಲೆಯಲ್ಲಿ ಜಾತ್ರೆ, ಸಭೆ, ಸಮಾರಂಭ ಗಳನ್ನು ನಡೆಸದಂತೆ ರಾಜ್ಯ ಸರಕಾರ ನಿರ್ಬಂಧ ವಿಧಿಸಿರುವುದರಿಂದ ಅನಿವಾರ್ಯ ವಾಗಿ ಜಾತ್ರೆ ಮೂಂದೂಡಬೇಕಾಗಿದೆ. ಮುಂದಿನ ದಿನಗಳಲ್ಲಿ ಅದ್ಧೂರಿಯಾಗಿ ಜಾತ್ರೆ ನಡೆಸಲಾಗುವುದು. ಭಕ್ತಾದಿಗಳು ಸಹಕರಿಸಬೇಕೆಂದು ಮನವಿ ಮಾಡಿದರು. ಗೋಷ್ಠಿಯಲ್ಲಿ ಸಮಿತಿಯ ಪದಾಧಿಕಾರಿಗಳಾದ ಪ್ರಸನ್ನಕುಮಾರ್, ರಾಧಾಕೃಷ್ಣ, ಜನಾರ್ಧನ, ರಾಜು ಇದ್ದರು.