ಸೋಮವಾರಪೇಟೆ, ಮಾ. 13: ಸಮೀಪದ ಸಿದ್ದಲಿಂಗಪುರ-ಅರಸಿನಕುಪ್ಪೆ ಗ್ರಾಮದಲ್ಲಿರುವ ಶ್ರೀ ಮಂಜುನಾಥ ಮತ್ತು ನವನಾಗ ಸನ್ನಿಧಿಗೆ ಗ್ರಾಮಸ್ಥರಾದ ಹೆಚ್.ಟಿ. ಸತೀಶ್ ಮತ್ತು ಕೆ.ಯು. ಹರೀಶ್ ಅವರುಗಳು ರೂ. 45 ಸಾವಿರ ಮೌಲ್ಯದ ಧ್ವನಿವರ್ಧಕವನ್ನು ಕೊಡುಗೆಯಾಗಿ ನೀಡಿದರು.

ದೇವಾಲಯದಲ್ಲಿ ನಡೆದ ವಿಶೇಷ ಪೂಜಾ ಕಾರ್ಯ ಕ್ರಮದಲ್ಲಿ, ದೇವಾಲಯದ ಪ್ರಧಾನ ಗುರುಗಳಾದ ಶ್ರೀ ರಾಜೇಶ್‍ನಾಥ್ ಗುರೂಜಿ ಅವರಿಗೆ ಹಸ್ತಾಂತರಿಸಲಾಯಿತು. ಈ ಸಂದರ್ಭ ದೇವಾಲಯ ಸಮಿತಿ ಅಧ್ಯಕ್ಷ ಮೋಹನ್, ಕಾರ್ಯದರ್ಶಿ ರಮೇಶ್, ಜೀರ್ಣೋದ್ಧಾರ ಸಮಿತಿ ಕಾರ್ಯದರ್ಶಿ ಪ್ರಕಾಶ್ ಸೇರಿದಂತೆ ಇತರರು ಉಪಸ್ಥಿತರಿದ್ದರು.