ಶನಿವಾರಸಂತೆ, ಮಾ. 13: ಶನಿವಾರಸಂತೆ ಗ್ರಾ.ಪಂ. ಕಚೇರಿ ಸಭಾಂಗಣದಲ್ಲಿ ಅಂತರ್ರಾಷ್ಟ್ರೀಯ ಮಹಿಳಾ ದಿನದ ಅಂಗವಾಗಿ ಮಹಿಳಾ ಗ್ರಾಮ ಸಭೆ ಏರ್ಪಡಿಸಲಾಗಿತ್ತು. ಸಭೆಯ ಅಧ್ಯಕ್ಷತೆಯನ್ನು ಗ್ರಾ.ಪಂ. ಉಪಾಧ್ಯಕ್ಷೆ ಗೀತಾ ಹರೀಶ್ ವಹಿಸಿದ್ದರು.
ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಬಿ.ಜೆ. ಮೇದಪ್ಪ ಮಾತನಾಡಿ, ಮಹಿಳಾ ದಿನದ ಅಂಗವಾಗಿ ಮಹಿಳೆಯರಿಗೆ ಮಾತೃವಂದನ ಮತ್ತು ಮಾತೃಶ್ರೀ ಕಾರ್ಯಕ್ರಮದ ಬಗ್ಗೆ ಮಾಹಿತಿ ನೀಡಿದರು. ತೋಟಗಾರಿಕಾ ಅಧಿಕಾರಿ ಸಿಂಧು ಮಾತನಾಡಿದರು.
ಸದಸ್ಯರುಗಳಾದ ಆದಿತ್ಯಾಗೌಡ, ಸೌಭಾಗ್ಯಲಕ್ಷ್ಮಿ, ಉಷಾ ಜಯಿಸ್, ಹೇಮಾವತಿ, ರಜನಿ, ಆಶಾ ಕಾರ್ಯಕರ್ತೆಯರು, ಅಂಗನವಾಡಿ ಕಾರ್ಯಕರ್ತೆಯರು ಉಪಸ್ಥಿತರಿದ್ದರು.