ಮಡಿಕೇರಿ: ಭಾರತ ಸರ್ಕಾರ ನೆಹರು ಯುವ ಕೇಂದ್ರ, ತಾಲೂಕು ಯುವ ಒಕ್ಕೂಟ ಮಡಿಕೇರಿ ಕಾವೇರಿ ಕಲಾ ವೃಂದ, ಕೋಟೆ ಮಹಿಳಾ ವಿವಿದೋದ್ದೇಶ ಸಹಕಾರ ಸಮಾಜ ಇವರ ಸಂಯುಕ್ತ ಆಶ್ರಯದಲ್ಲಿ ಅಂತರರಾಷ್ಟ್ರೀಯ ಮಹಿಳಾ ದಿನಾಚರಣೆಯನ್ನು ಕೋಟೆ ಮಹಿಳಾ ಸಮಾಜ ಸಭಾಂಗಣದಲ್ಲಿ ನಡೆಸಲಾಯಿತು.

ಕಾರ್ಯಕ್ರಮವನ್ನು ಜಿಲ್ಲಾ ಕಾನೂನು ಪ್ರಾಧಿಕಾರದ ಸದಸÀ್ಯ ಕಾರ್ಯದರ್ಶಿ ನೂರುನ್ನೀಸಾ ಉದ್ಘಾಟಿಸಿ ಮಹಿಳಾ ದಿನಾಚರಣೆಯ ಮಹತ್ವದ ಬಗ್ಗೆ ತಿಳಿಸಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕೋಟೆ ಮಹಿಳಾ ಸಮಾಜದ ಅಧ್ಯಕ್ಷೆ ಪ್ರೇಮ ಸೋಮಯ್ಯ ವಹಿಸಿದ್ದರು. ಕಾರ್ಯಕ್ರಮದಲ್ಲಿ ಕಾವೇರಿ ಕಲಾ ವೃಂದದ ಅಧ್ಯಕ್ಷೆ ರಾಣಿ ಮಾಚಯ್ಯ ಹಾಗೂ ಮಹಿಳಾ ಪೌರ ಕಾರ್ಮಿಕೆ ಮೀನಾಕ್ಷಿ ವೆಂಕಟಪ್ಪ ಇವರನ್ನು ಸನ್ಮಾನಿಸಲಾಯಿತು.ಮಡಿಕೇರಿ: ವಿ. ಬಾಡಗದಲ್ಲಿ ಜರುಗಿದ ಮಹಿಳಾ ದಿನಾಚರಣೆಯಲ್ಲಿ ಸಮಾರಂಭದ ಮಹಿಳಾ ಸಮಾಜದ ಅಧ್ಯಕ್ಷೆ ಅಮ್ಮಣಿಚಂಡ ಪರ್ಲ್ ಮುತ್ತಮ್ಮ ಅಧ್ಯಕ್ಷತೆ ವಹಿಸಿದ್ದರು. ಮುಖ್ಯ ಅತಿಥಿಯಾಗಿ ಡಾ. ಮುಲ್ಲೇಂಗಡ ರೇವತಿ ಪೂವಯ್ಯ ಹಾಜರಿದ್ದರು. ಮಹಿಳಾ ದಿನಾಚರಣೆ ಬಗ್ಗೆ ಮಾತನಾಡಿ, ಕವನ ವಾಚಿಸಿದರು. ವಿ ಬಾಡಗ ಮಹಿಳಾ ಸಮಾಜದ ವತಿಯಿಂದ ಮುಲ್ಲೇಂಗಡ ರೇವತಿ ಪೂವಯ್ಯ ಅವರನ್ನು ಸನ್ಮಾನಿಸಲಾಯಿತು. ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದ ಮಾಜಿ ಅಧ್ಯಕ್ಷೆ ಮಳವಂಡ ಮೀನಾಕ್ಷಿ ತೀತಿಮಾಡ ಪಾರ್ವತಿ, ಮುಲ್ಲೇಂಗಡ ಬೇಬಿ ಚೋಂದಮ್ಮ ಮಹಿಳಾ ದಿನಚರಣೆ ಬಗ್ಗೆ ಮಾತನಾಡಿದರು. ಕಾರ್ಯದರ್ಶಿ ಅಮ್ಮೇಕಂಡ ಜನಿತಾ ನಿರೂಪಿಸಿದರು. ಕಾರ್ಯಕ್ರಮದ ಅಂಗವಾಗಿ ವಿವಿಧ ಆಟೋಟ ಸ್ಪರ್ರ್ಧೆಗಳನ್ನು ಹಮ್ಮಿಕೊಳ್ಳಲಾಯಿತು. ವೀರಾಜಪೇಟೆ: ಮಹಿಳೆಯರು ಇಂದು ಅಬಲೆಯರಲ್ಲ ಸಬಲೆಯರು. ವಿವಿಧ ಕ್ಷೇತ್ರದಲ್ಲಿ ಸಾಧನೆಗೈದು ಜಗತ್ತಿಗೆ ತೋರಿಸಿಕೊಟ್ಟಿದ್ದಾರೆ ಎಂದು ವೀರಾಜಪೇಟೆ ವಕೀಲೆ ಪಟ್ಟಡ ರೀನಾ ಪ್ರಕಾಶ್ ಅಭಿಪ್ರಾಯ ವ್ಯಕ್ತಪಡಿಸಿದರು.

ಸಂಜೀವಿನಿ ಯೋಜನಾ ಸಂಘ (ಎನ್.ಅರ್.ಎಲ್.ಎಂ.) ಆರ್ಜಿ ಗ್ರಾಮ ಪಂಚಾಯಿತಿ ವೀರಾಜಪೇಟೆ ಇವರುಗಳ ಆಶ್ರಯದಲ್ಲಿ 2ನೇ ಪೆರುಂಬಾಡಿ ಶ್ರೀ ಅಯ್ಯಪ್ಪ ಸ್ವಾಮಿ ಭಜನಾ ಮಂಡಳಿಯ ಸಭಾಂಗಣದಲ್ಲಿ ನಡೆದ ಅಂತರರಾಷ್ಟ್ರೀಯ ಮಹಿಳಾ ದಿನಾಚರಣೆ ಅಂಗವಾಗಿ ಆಯೋಜಿಸಲಾಗಿದ್ದ ಕಾರ್ಯಕ್ರಮಕ್ಕೆ ಮುಖ್ಯ ಅತಿಥಿಗಳಾಗಿ ಆಗಮಿಸಿ ಮಾತನಾಡಿ, ಸಮಾಜದಲ್ಲಿ ಹೆಣ್ಣು ಮಗಳು ವಿದ್ಯಾವಂತಳಾಗಿ, ಆರ್ಥಿಕವಾಗಿ, ಸಾಮಾಜಿಕವಾಗಿ ಸದೃಢವಾಗಿ ಸಾಗುತಿದ್ದಾಳೆ. ಪುರುಷ ಪ್ರಧಾನ ಸಮಾಜದಲ್ಲಿ ಮಹಿಳೆಯರು ಪುರಷರಿಗೆ ಸರಿಸಮಾನರಾಗಿ ನಿಲ್ಲುವಂತರಾಗಿದ್ದಾರೆ. ಶಿಕ್ಷಣ, ಕ್ರೀಡೆ, ಸಾಹಿತ್ಯ ಮುಂತಾದ ಕ್ಷೇತ್ರದಲ್ಲಿ ತನ್ನದೇ ಆದ ಛಾಪು ಮೂಡಿಸಿದ್ದಾರೆ ಎಂದು ಹೇಳಿದರು.

ಸಮಾರಂಭಕ್ಕೆ ಮುಖ್ಯ ಅತಿಥಿಗಳಾಗಿ ಆಗಮಿಸಿ ಮಾತನಾಡಿದ ತಾಲೂಕು ಪಂಚಾಯಿತಿ ಸದಸ್ಯ ಬಿ.ಎಂ. ಗಣೇಶ್, ಪ್ರಸ್ತುತ ಕಾಲಘಟ್ಟದಲ್ಲಿ ಸಮಾಜದ ಎಲ್ಲಾ ಕ್ಷೇತ್ರದಲ್ಲಿ ಮಹಿಳೆ ತನ್ನ ಇರುವಿಕೆಯನ್ನು ಗುರುತಿಸಿದ್ದಾರೆ. ಅಲ್ಲದೆ ಸಾಧನೆಯ ಹಾದಿಯಲ್ಲಿ ಮುನ್ನಡೆ ಸಾದಿಸಿದ್ದಾರೆ. ಸಮಾಜಕ್ಕೆ ಹೆಣ್ಣು ಭಾರವೆಂದು ತಿಳಿಯದೆ ಶಿಕ್ಷಣವನ್ನು ಒದಗಿಸಿ ಸಮಾಜದ ಮುಖ್ಯವಾಹಿನಿಗೆ ಬರುವಂತೆ ಮಾಡಿ ಎಂದು ಕರೆ ನೀಡಿದರು.

ಸಮಾರಂಭ ಉದ್ದೇಶಿಸಿ ಬೇಟೋಳಿ ಗ್ರಾಮ ಪಂಚಾಯಿತಿ ಅಧ್ಯಕ್ಷೆ ಬಿ.ಬಿ. ಚೊಂದಮ್ಮ ಮತ್ತು ಸಂಜೀವಿನಿ ಸಂಘದ ಜಿಲ್ಲಾ ವ್ಯವಸ್ಥಾಪಕ ಪಿ. ಕುಮಾರ್ ಮಾತನಾಡಿದರು. ಆರ್ಜಿ ಗ್ರಾಮ ಪಂಚಾಯಿತಿ ಅಧ್ಯಕ್ಷೆ ಹೆಚ್.ಎನ್. ಗಾಯತ್ರಿ ಸಮಾರಂಭದ ಅಧ್ಯಕ್ಷೆತೆ ವಹಿಸಿ ಮಾತನಾಡಿದರು.

ವೇದಿಕೆಯಲ್ಲಿ ಆರ್ಜಿ ಗ್ರಾಮ ಪಂಚಾಯಿತಿ ಉಪಧ್ಯಕ್ಷ ಬಿ.ಎಂ. ರಮೇಶ್, ಆರ್ಜಿ ಪಂಚಾಯಿತಿ ಪಿ.ಡಿ.ಒ. ಬಿ. ಮಣಿ, ವಾರಿಜ ಮಹಾಬಲ, ಒ.ಡಿ.ಪಿ. ಸಂಸ್ಥೆಯ ಕೊಡಗು ಜಿಲ್ಲಾ ಸಂಯೋಜಕಿ ಜಾಯ್ಸ್ ಮೆನಜಸ್, ರೀಟಾ ಜೋಸೆಫ್ ಒ.ಡಿ.ಪಿ. ಕಾರ್ಯಕರ್ತೆಯರು ಉಪಸ್ಥಿತರಿದ್ದರು.

ಮಹಿಳೆಯರಿಂದ ವಿವಿಧ ಸಂಸ್ಕøತಿಕ ಕಾರ್ಯಕ್ರಮಗಳು ನಡೆದವು. ಸ್ಪರ್ಧೆಗಳಲ್ಲಿ ವಿಜೇತರಿಗೆ ಪುರಸ್ಕಾರ ನೀಡಿ ಗೌರವಿಸಲಾಯಿತು. ಸಮಾರಂಭದಲ್ಲಿ ಸ್ಥಳೀಯ ಗ್ರಾಮದ ವಿವಿಧ ಸಂಘ-ಸಂಸ್ಥೆಗಳ ಮಹಿಳಾ ಸದಸ್ಯರು ಸಂಜೀವಿನಿ ಆರ್ಜಿ ಗ್ರಾಮ ಪಂಚಾಯಿತಿ ಒಕ್ಕೂಟದ ಸದಸ್ಯರು ಮತ್ತು ಗ್ರಾಮಸ್ಥರು ಹಾಜರಿದ್ದರು.