ಕೂಡಿಗೆ, ಮಾ. 15: ಕೂಡಿಗೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಹೆಗ್ಗಡಳ್ಳಿ ಗ್ರಾಮದಲ್ಲಿರುವ ಹರಕೆ ಚೌಡೇಶ್ವರಿ ದೇವಿ ಮತ್ತು ನಾಗದೇವರ ವಾರ್ಷಿಕ ಪೂಜಾ ಕಾರ್ಯಕ್ರಮ ಹರಕೆ ಚೌಡೇಶ್ವರಿ ದೇವಿ ದೇವಾಲಯ ಸಮಿತಿಯ ವತಿಯಿಂದ ಶ್ರದ್ಧಾ ಭಕ್ತಿಯಿಂದ ಆಚರಿಸಲಾಯಿತು. ತಾ. 13ರ ಬೆಳಿಗ್ಗೆ ಗಣಪತಿ ಹೋಮ, ದುರ್ಗಾ ಹೋಮ, ಕಲಾವೃದ್ಧಿ ಹೋಮ, ದೇವಿಗೆ ವಿವಿಧ ಅಭಿಷೇಕ ಸೇರಿದಂತೆ ಪೂಜಾ ಕಾರ್ಯಕ್ರಮಗಳು ನಡೆದವು. ಮಧ್ಯಾಹ್ನ 12 ಗಂಟೆಗೆ ಮಹಾಮಂಗಳಾರತಿ ತೀರ್ಥ ಪ್ರಸಾದ ವಿನಿಯೋಗ. ನಂತರ. ಪೂಜಾ ಕಾರ್ಯಕ್ರಮ ನಡೆಯಿತು. ಭಾಗವಹಿಸಿದ ಸಾವಿರಾರು ಭಕ್ತಾಧಿಗಳಿಗೆ ಅನ್ನಸಂತರ್ಪಣೆ ನಡೆಯಿತು.
ಸಂಜೆ ದೇವಾಲಯ ಆವರಣದಲ್ಲಿ ದೀಪಾಲಂಕಾರ ಮತ್ತು ವಿಶೇಷ ಪೂಜಾ ಕಾರ್ಯಕ್ರಮ ನಡೆಯಿತು. ಈ ವಾರ್ಷಿಕೋತ್ಸವ ಪೂಜೋತ್ಸವದಲ್ಲಿ ಕೂಡಿಗೆ, ಕೂಡುಮಂಗಳೂರು, ಮದಲಾಪುರ, ಹುದುಗೂರು, ಸೀಗೆಹೊಸೂರು, ಮಲ್ಲೇನಹಳ್ಳಿ ಸೇರಿದಂತೆ ಅನೇಕ ಗ್ರಾಮಗಳ ಸಾವಿರಾರು ಭಕ್ತಾದಿಗಳು ಭಾಗವಹಿಸಿದರು. ಈ ಸಂದರ್ಭ ದೇವಾಲಯ ಸಮಿತಿಯ ಅಧ್ಯಕ್ಷ ಕೆ.ಸಿ. ರವಿ, ಕಾರ್ಯದರ್ಶಿ ಪ್ರವೀಣ ಸೇರಿದಂತೆ ಸಮಿತಿಯ ಸದಸ್ಯರು ಪಕ್ಕದ ಗ್ರಾಮಗಳ ವಿವಿಧ ದೇವಾಲಯ ಸಮಿತಿಯ ಅಧ್ಯಕ್ಷರು ಗ್ರಾಮ ಪಂಚಾಯತಿ ಅಧ್ಯಕ್ಷೆ ಸೇರಿದಂತೆ ಸರ್ವ ಸದಸ್ಯರು ಭಾಗವಹಿಸಿದರು. ಪೂಜಾ ಕೈಂಕರ್ಯವನ್ನು ಗಣಪತಿ ಭಟ್ಟರು ಹಾಗೂ ಚಂದ್ರಮುರುಳಿ ನೆರವೇರಿಸಿದರು..