ಸೋಮವಾರಪೇಟೆ, ಮಾ. 15: ಇಲ್ಲಿನ ವೆಂಕಟೇಶ್ವರ ಬ್ಲಾಕ್ನ ಅಂಬೇಡ್ಕರ್ ಯುವಕ ಸಂಘದ ವತಿಯಿಂದ ಏಪ್ರಿಲ್ 26 ರಂದು ಸ್ಥಳೀಯ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲಾ ಮೈದಾನದಲ್ಲಿ ಕೊಡಗು ಮತ್ತು ಹಾಸನ ಜಿಲ್ಲಾ ಆಟಗಾರರನ್ನು ಒಳಗೊಂಡ ‘ಅಂಬೇಡ್ಕರ್ ಕಪ್’ ಹೊನಲು ಬೆಳಕಿನ ಕಬಡ್ಡಿ ಪಂದ್ಯಾಟ ಆಯೋಜಿಸಲಾಗಿದೆ ಎಂದು ಸಂಘದ ಅಧ್ಯಕ್ಷ ಎಸ್.ಸಿ. ಸತೀಶ್ ತಿಳಿಸಿದ್ದಾರೆ.
ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಅಂಬೇಡ್ಕರ್ ಜಯಂತಿ ಅಂಗವಾಗಿ ಪಂದ್ಯಾವಳಿ ಆಯೋಜಿಸಿದ್ದು, ಕೊಡಗು ಮತ್ತು ಹಾಸನ ಜಿಲ್ಲೆಗಳ ತಂಡಗಳು ಭಾಗವಹಿಸಲಿವೆ ಎಂದು ಮಾಹಿತಿ ನೀಡಿದರು.
ಪಂದ್ಯಾಟದಲ್ಲಿ ಪ್ರಥಮ ಸ್ಥಾನ ಪಡೆಯುವ ತಂಡಕ್ಕೆ ರೂ. 30 ಸಾವಿರ ನಗದು, ದ್ವಿತೀಯ ಸ್ಥಾನ ಗಳಿಸುವ ತಂಡಕ್ಕೆ ರೂ. 15 ಸಾವಿರ ನಗದು, ಮೂರು ಮತ್ತು ನಾಲ್ಕನೇ ಸ್ಥಾನಗಳಿಸುವ ತಂಡಕ್ಕೆ ರೂ. 5 ಸಾವಿರ ನಗದು ಮತ್ತು ಟ್ರೋಫಿ ಸೇರಿದಂತೆ, ಉತ್ತಮ ದಾಳಿಗಾರ ಮತ್ತು ಉತ್ತಮ ಹಿಡಿತಗಾರ ಪ್ರಶಸ್ತಿಯನ್ನು ನೀಡಲಾಗುವದು ಎಂದರು.
ಅಂದು ಮಧ್ಯಾಹ್ನ 2 ಗಂಟೆಗೆ ಪಂದ್ಯಾವಳಿ ಆರಂಭವಾಗಲಿದ್ದು, ತಾ. 25 ರಂದು ತಂಡಗಳನ್ನು ನೋಂದಾಯಿಸಿಕೊಳ್ಳಲು ಕೊನೆಯ ದಿನವಾಗಿದೆ. ಹೊನಲು ಬೆಳಕಿನ ಪಂದ್ಯಾಟವನ್ನು ಮಾಜಿ ಸಚಿವ ಬಿ.ಎ. ಜೀವಿಜಯ ಉದ್ಘಾಟಿಸಲಿದ್ದಾರೆ ಎಂದು ತಿಳಿಸಿದರು. ಪಂದ್ಯಾಟದ ಬಗ್ಗೆ ಹೆಚ್ಚಿನ ಮಾಹಿತಿಗೆ. 9481853491, 8762817896 ಸಂಖ್ಯೆಗಳನ್ನು ಸಂಪರ್ಕಿಸಬಹುದಾಗಿದೆ ಎಂದರು.
ಗೋಷ್ಠಿಯಲ್ಲಿ ಸಂಘದ ಉಪಾಧ್ಯಕ್ಷ ರಾಜಪ್ಪ, ಪದಾಧಿಕಾರಿಗಳಾದ ಟಿ. ಪಣೀಶ್, ಹೆಚ್.ಜಿ. ರಮೇಶ್, ಕೆ.ಆರ್. ಪ್ರಸಾದ್ ಅವರುಗಳು ಉಪಸ್ಥಿತರಿದ್ದರು.