ಸಿದ್ದಾಪುರ, ಮಾ. 15: ಬಾಡಗ ಬಾಣಂಗಾಲ ಗ್ರಾಮ ವ್ಯಾಪ್ತಿಯಲ್ಲಿ ಕಾಫಿ ತೋಟಗಳಲ್ಲಿ ಇರುವ ಕಾಡಾನೆಗಳನ್ನು ಅರಣ್ಯಕ್ಕೆ ಅಟ್ಟಬೇಕೆಂದು ಗ್ರಾಮಸ್ಥರು ಒತ್ತಾಯಿಸಿದ ಹಿನ್ನೆಲೆಯಲ್ಲಿ ತಿತಿಮತಿ ಉಪವಲಯ ಅರಣ್ಯ ಅಧಿಕಾರಿ ಶ್ರೀನಿವಾಸ್, ಅರಣ್ಯ ಇಲಾಖೆ ಸಿಬ್ಬಂದಿ ಹಾಗೂ ಆರ್.ಆರ್.ಟಿ. ತಂಡದ ಸಿಬ್ಬಂದಿ ಸೇರಿದಂತೆ ಹದಿನೈದು ಮಂದಿ ತಂಡ ಕಾಫಿ ತೋಟದಲ್ಲಿ ಕಾರ್ಯಾಚರಣೆ ನಡೆಸಿದರು.