ಸಿದ್ದಾಪುರ, ಮಾ. 15: ನೆಲ್ಲಿಹುದಿಕೇರಿ ಗ್ರಾ.ಪಂ. ವತಿಯಿಂದ ಗ್ರಾಮ ವ್ಯಾಪ್ತಿಯ ಉತ್ತಮ ಕ್ರೀಡಾ ಪಟುಗಳಿಗೆ ಕ್ರೀಡಾ ಪ್ರೋತ್ಸಾಹ ಧನ ತಲಾ ರೂ. 10 ಸಾವಿರವನ್ನು ರಾಜ್ಯ ಮಟ್ಟದ ಬ್ಯಾಡ್ಮಿಂಟನ್ ಆಟಗಾರ ಅವಿನಾಶ್ ಶ್ಯಾಂ ರವರಿಗೆ ಹಾಗೂ ಇನ್ನಿತರ ರಾಜ್ಯಮಟ್ಟಕ್ಕೆ ಆಯ್ಕೆಯಾದ ಕ್ರೀಡಾಪಟುಗಳಿಗೆ ಪಂಚಾಯಿತಿ ವತಿಯಿಂದ ನೀಡಲಾಯಿತು.

ಈ ಸಂದರ್ಭ ಗ್ರಾ.ಪಂ. ಉಪಾಧ್ಯಕ್ಷೆ ಸೆಫಿಯಾ ಹಾಗೂ ಪಿ.ಡಿ.ಓ. ಅನಿಲ್ ಕುಮಾರ್ ಮತ್ತು ಗ್ರಾ.ಪಂ. ಸದಸ್ಯರುಗಳು ಹಾಜರಿದ್ದರು.