ಸಿದ್ದಾಪುರ, ಮಾ. 15: ತನ್ನ ಗದ್ದೆಯಲ್ಲಿ ಪಾರ್ಟಿ ಮಾಡುತ್ತಿರುವ ಬಗ್ಗೆ ಪ್ರಶ್ನಿಸಿದ ವಿಚಾರದಲ್ಲಿ ಕಲಹ ನಡೆದು ವ್ಯಕ್ತಿಯೋರ್ವನಿಗೆ ನಾಲ್ವರು ಹಲ್ಲೆ ನಡೆಸಿದ್ದಾರೆ ಎಂದು ಸಿದ್ದಾಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಸಿದ್ದಾಪುರ ಗುಹ್ಯ ಗ್ರಾಮದ ಕೂಡುಗದ್ದೆ ನಿವಾಸಿ ಉಮೇಶ್ ಎಂಬವರಿಗೆ ಸೇರಿದ ಗದ್ದೆಯಲ್ಲಿ ಅವರ ಸಂಬಂಧಿಕರಾದ ರವಿ, ಸೂರಿ, ಮಣಿ, ಪ್ರಸನ್ನ ಎಂಬವರು ರಾತ್ರಿ ಸಮಯದಲ್ಲಿ ಪಾರ್ಟಿ ಮಾಡುತ್ತಿದ್ದರು ಎನ್ನಲಾಗಿದೆ. ಈ ವಿಚಾರದಲ್ಲಿ ಉಮೇಶ್ ತನ್ನ ಗದ್ದೆಯಲ್ಲಿ ಯಾಕೆ ಪಾರ್ಟಿ ಮಾಡುತ್ತಿದ್ದೀರಾ ಎಂದು ಪ್ರಶ್ನಿಸಿದರು ಎನ್ನಲಾಗಿದ್ದು, ಈ ಸಂದರ್ಭ ಉಭಯ ಕಡೆಗಳ ನಡುವೆ ಮಾತಿನ ಚಕಮಕಿ ನಡೆದು ಸೂರಿ, ಮಣಿ, ರವಿ, ಪ್ರಸನ್ನ ನಾಲ್ವರು ಸೇರಿ ಉಮೇಶ್ ಮೇಲೆ ಹಲ್ಲೆ ನಡೆಸಿ ಕತ್ತಿಯ ಹಿಂಭಾಗದಿಂದ ತಲೆಯ ಭಾಗಕ್ಕೆ ಹೊಡೆದು ಗಾಯಗೊಳಿಸಿದ್ದಾರೆ ಎಂದು ಉಮೇಶ್ ಸಿದ್ದಾಪುರ ಪೊಲೀಸ್ ಠಾಣೆಗೆ ದೂರು ನೀಡಿದ್ದು, ಸಿದ್ದಾಪುರ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಹಲ್ಲೆ ನಡೆಸಿದ ಆರೋಪಿಗಳು ರಾತ್ರಿಯೆ ಪರಾರಿಯಾಗಿದ್ದಾರೆ. ಹಲ್ಲೆಗೆ ಒಳಗಾದ ಗಾಯಾಳು ಉಮೇಶ್ ಸ್ಥಳೀಯ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಚಿಕಿತ್ಸೆ ಪಡೆದಿದ್ದಾರೆ.