ಶ್ರೀಮಂಗಲ, ಮಾ. 16 : ಸರಕಾರ ಹಾಗೂ ಶಿಕ್ಷಣ ಇಲಾಖೆಯಿಂದ ಕಾಲಕಾಲಕ್ಕೆ ಶಿಕ್ಷಣ ಇಲಾಖೆಗೆ ಸಂಬಂಧಿಸಿದಂತೆ ಶಾಲೆಗಳಿಗೆ ನಿರ್ದೇಶನವನ್ನು ನೀಡುತ್ತದೆ. ಅದರಂತೆ ಪ್ರಸಕ್ತ ಕೊರೊನಾ ವೈರಸ್ ಸೋಂಕಿನಿಂದ ಪರೀಕ್ಷೆಗಳನ್ನು ಮುಂದೂಡುವಂತೆ ನಿರ್ದೇಶಿಸಲಾಗಿದೆ. ಯಾವುದೇ ವಿಷಯಕ್ಕೆ ಅನುಗುಣವಾಗಿ ಆದೇಶ ಬಂದರೆ ಅದನ್ನು ಎಲ್ಲಾ ಖಾಸಗಿ ಶಾಲೆಗಳು ಪಾಲಿಸುವಂತೆ ಜಿಲ್ಲಾ ಖಾಸಗಿ ಅನುದಾನ ರಹಿತ ಶಾಲೆಗಳ ಒಕ್ಕೂಟದ ಕಾರ್ಯದರ್ಶಿ ಕೋಟ್ರಂಗಡ ಎಸ್. ತಿಮ್ಮಯ್ಯ ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿದ್ದಾರೆ.