ಕುಶಾಲನಗರ, ಮಾ. 16: ತಾಲೂಕಿನ ವಿಚಾರವನ್ನು ಮುಂದಿಟ್ಟುಕೊಂಡು ಪ್ರಚಾರ ಗಿಟ್ಟಿಸುವ ಹುನ್ನಾರದಲ್ಲಿ ಕೆಲವು ನಾಯಕರು ಇಲ್ಲಸಲ್ಲದ ಹೇಳಿಕೆ ನೀಡುವುದರೊಂದಿಗೆ ಪ್ರತಿಭಟನೆ ಮಾಡುವುದಾಗಿ ಪತ್ರಿಕಾ ಪ್ರಕಟಣೆ ನೀಡಿರುವುದು ಅನುಮಾನಕ್ಕೆ ಎಡೆಮಾಡಿದೆ ಎಂದು ಬಿಜೆಪಿ ಅಧ್ಯಕ್ಷ ಕೆ.ಜಿ. ಮನು ತಿಳಿಸಿದ್ದಾರೆ. ತಾಲೂಕು ರಚನೆಯ ವಿಚಾರವಾಗಿ ಅಧಿವೇಶನದಲ್ಲಿ ವಿಧಾನ ಪರಿಷತ್ ಸದಸ್ಯ ಸುನೀಲ್ ಸುಬ್ರಮಣಿ ದನಿ ಎತ್ತಿ ಸರ್ಕಾರದ ಗಮನಸೆಳೆದಿದ್ದಾರೆ. ತ್ವರಿತವಾಗಿ ಸ್ಪಂದಿಸುವ ಭರವಸೆಯನ್ನು ಸರ್ಕಾರ ನೀಡಿದೆ. ನೂತನ ತಾಲೂಕಿಗೆ ಸಂಬಂಧಪಟ್ಟಂತೆ ಕಚೇರಿಗಳ ನಿರ್ಮಾಣಕ್ಕೆ ಕ್ಷೇತ್ರದ ಶಾಸಕ ಎಂ.ಪಿ. ಅಪ್ಪಚ್ಚುರಂಜನ್ ಖುದ್ದು ಸ್ಥಳ ವೀಕ್ಷಣೆ ಮಾಡಿದ್ದಾರೆ. ಅದರಲ್ಲಿ ಸೂಕ್ತವಾದ ಜಾಗ ಗುರುತಿಸಿ ಸರ್ವೆ ಕಾರ್ಯ ಮಾಡಿ ಕೆಲಸ ತ್ವರಿತಗತಿಯಲ್ಲಿ ನಡೆಯಲು ಸೂಚಿಸಿದ್ದು, ಅದರಂತೆ ಕೆಲಸಗಳು ನಡೆಯುತ್ತಿದೆ. ಜನತೆಯ ಮನದಲ್ಲಿ ಅನುಮಾನ ಸೃಷ್ಟಿಸುವ ಕೆಲಸಕ್ಕೆ ಕಾಂಗ್ರೆಸ್ ಪ್ರಮುಖರು ಮುಂದಾಗಿರುವುದು ಸರಿಯಲ್ಲ ಎಂದಿದ್ದಾರೆ.