ಗೋಣಿಕೊಪ್ಪ ವರದಿ, ಮಾ. 14 : ಪೊನ್ನಂಪೇಟೆ ಜೈಭೀಮ್ ಕಲಾ ತಂಡ ಹಾಗೂ ಕನ್ನಡ ಮತ್ತು ಸಂಸ್ಕøತಿ ಇಲಾಖೆ ಸಹಯೋಗದಲ್ಲಿ ತಾಲೂಕಿನ 4 ಸರ್ಕಾರಿ ಶಾಲೆಗಳಲ್ಲಿ ಇತ್ತೀಚೆಗೆ ಸಂಗೀತ ಕಾರ್ಯಕ್ರಮ ನಡೆಸಲಾಯಿತು.
ಹುದೂರು ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಸುಮಾರು 70 ವಿದ್ಯಾರ್ಥಿಗಳು ಪಾಲ್ಗೊಂಡರು. ಮುಖ್ಯ ಶಿಕ್ಷಕಿ ಬಿನಿ ತಮಟೆ ಬಾರಿಸಿ ಉದ್ಘಾಟಿಸಿದರು. ಕುಂದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ 120 ವಿದ್ಯಾರ್ಥಿಗಳು, ಕೈಕೇರಿ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯಲ್ಲಿ 80, ಹಾತೂರು ಸರ್ಕಾರಿ ಪ್ರೌಢಶಾಲೆಯಲ್ಲಿ 300 ವಿದ್ಯಾರ್ಥಿಗಳು ಪಾಲ್ಗೊಂಡರು. ಕಲಾವಿದರಾದ ಎಸ್. ಟಿ. ಗಿರೀಶ್, ಶರತ್ಕುಮಾರ್, ಪ್ರವೀಣಕುಮಾರ್, ಜಿ. ನಿರ್ಮಲ, ರೂಪ, ಅಭಿಷೇಕ್ ಸಂಗೀತ ಕಾರ್ಯಕ್ರಮ ನಡೆಸಿಕೊಟ್ಟರು.