ಮಡಿಕೇರಿ, ಮಾ. 18 : ಓಂಕಾರೇಶ್ವರ ದೇವಾಲಯದಲ್ಲಿ ತಾ. 20 ರಿಂದ 25 ರವರೆಗೆ ನಡೆಸಲು ಉದ್ದೇಶಿಸಲಾಗಿದ್ದ ಅಷ್ಟಬಂಧ ಬ್ರಹ್ಮಕಲಶೋತ್ಸವ ಕಾರ್ಯಕ್ರಮವನ್ನು ಕೊರೊನಾ ವೈರಸ್ ಹಿನ್ನೆಲೆಯಲ್ಲಿ ಹಾಗೂ ಭಕ್ತಾಧಿಗಳು, ಯಾತ್ರಾರ್ಥಿಗಳ ಆರೋಗ್ಯ ಸುರಕ್ಷತೆ ಗಮನದಲ್ಲಿರಿಸಿಕೊಂಡು ಮುಂದೂಡಲಾಗಿದೆ ಎಂದು ಓಂಕಾರೇಶ್ವರ ದೇವಾಲಯದ ಕಾರ್ಯನಿರ್ವಾಹಣಾಧಿಕಾರಿ ಜಗದೀಶ್ ಕುಮಾರ್ ತಿಳಿಸಿದ್ದಾರೆ.