ಮಡಿಕೇರಿ, ಮಾ. 17: ವೀರಾಜಪೇಟೆ ತಾಲೂಕು ಕನ್ನಡ ಸಾಹಿತ್ಯ ಪರಿಷತ್ತು ಹಾಗೂ ಇತರ ಎಲ್ಲಾ ಸಂಘ-ಸಂಸ್ಥೆಗಳ ಸಹಯೋಗ ದಲ್ಲಿ ಕನ್ನಡ ಸಾಹಿತ್ಯ ಲೋಕದ ಮೇರುಪರ್ವತ ಪಾಟೀಲ ಪುಟ್ಟಪ್ಪ ಅವರು ವಿಧಿವಶರಾಗಿರುವ ಹಿನ್ನೆಲೆ ಯಲ್ಲಿ ತಾ. 18 ರಂದು (ಇಂದು) ಬೆಳಿಗ್ಗೆ 11 ಗಂಟೆಯಿಂದ 11.30ರ ವರೆಗೆ ವೀರಾಜಪೇಟೆ ಪ.ಪಂ. ಸಭಾಂಗಣದಲ್ಲಿ ಶ್ರದ್ಧಾಂಜಲಿ ಸಭೆಯನ್ನು ಹಮ್ಮಿಕೊಳ್ಳಲಾಗಿದೆ.