ಕೂಡಿಗೆ, ಮಾ. 18: ಕೂಡಿಗೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಬ್ಯಾಡಗೊಟ್ಟ ಗ್ರಾಮದಲ್ಲಿ ಕಸ ವಿಲೇವಾರಿ ಮಾಡುವ ಘಟಕಕ್ಕೆ ಭೂಮಿಪೂಜೆಯನ್ನು ಕೂಡಿಗೆ ಗ್ರಾಮ ಪಂಚಾಯಿತಿ ಅಧ್ಯಕ್ಷೆ ಪ್ರೇಮಲೀಲಾ ನೆರವೇರಿಸಿದರು.

ನಂತರ ಮಾತನಾಡಿದ ಅವರು, ಸರಕಾರದ ಗ್ರಾಮ ವಿಕಾಸ ಯೋಜನೆಯಡಿಯಲ್ಲಿ ಹತ್ತು ಲಕ್ಷ ಹಣದಲ್ಲಿ ಕಸ ವಿಲೇವಾರಿ ಘಟಕವನ್ನು ಪ್ರಾರಂಭಿಸುವ ಚಿಂತನೆ ಮಾಡಲಾಗಿತ್ತು. ಅದರಂತೆ ಜಿಲ್ಲಾ ಪಂಚಾಯಿತಿ ಕಾರ್ಯನಿರ್ವಹಣಾಧಿಕಾರಿ ಆದೇಶದಂತೆ ಕಸ ವಿಲೇವಾರಿ ಘಟಕಕ್ಕೆ ಭೂಮಿಪೂಜೆ ಮಾಡಲಾಗಿದೆ ಎಂದರು. ಈ ಘಟಕದಲ್ಲಿ ಒಣಕಸ ಮತ್ತು ಹಸಿ ಕಸವನ್ನು ವಿಂಗಡಿಸಲಾಗುವುದು. ಅಲ್ಲದೆ ಈ ಭಾಗದಲ್ಲಿನ ಕುಟುಂಬದವರಿಗೆ ರೋಗ ರುಜಿನಗಳು ಬರದಂತೆ ಕ್ರಮಕೈಗೊಳ್ಳಲು ತೀರ್ಮಾನಿಸಲಾಗಿದೆ ಎಂದರು. ಈ ಸಂದರ್ಭ ಗ್ರಾ.ಪಂ. ಸದಸ್ಯರುಗಳಾದ ಮಂಜಯ್ಯ, ಮೋಹಿನಿ, ರತ್ನಮ್ಮ, ಧ್ವವಿಕೃಷ್ಣ, ಪುಷ್ಪ, ಕಲ್ಪನಾ, ಪವಿತ್ರ ಸೇರಿದಂತೆ ಸದಸ್ಯರು, ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಶಿಲ್ಪಾ, ಗ್ರಾಮ ಲೆಕ್ಕಾಧಿಕಾರಿ ಗುರುದರ್ಶನ್ ಸೇರಿದಂತೆ ಗ್ರಾಮಸ್ಥರು ಹಾಜರಿದ್ದರು.